ವಿಜಯಪುರ | ಕ್ವಿಂಟಾಲ್ ತೊಗರಿಗೆ ರಾಜ್ಯ ಸರ್ಕಾರದಿಂದ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Date:

ಪ್ರತಿ ಕ್ವಿಂಟಾಲ್ ತೊಗರಿ ಬೆಂಬಲ ಬೆಲೆಯಲ್ಲಿ 7,550 ರೂಪಾಯಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೊ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೊ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

- Advertisement -

ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಪ್ರತಿ ಕ್ವಿಂಟಾಲ್ ತೊಗರಿಗೆ ಒಟ್ಟು ಎಂಟು ಸಾವಿರ ರೊ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ನಫೆಡ್ ಖರೀದಿ ಏಜೆನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸುವ ಕಾರಣ, ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ಈ ಬಗ್ಗೆ ತೊಗರಿ ಬೆಲೆಗಾರರು ಆತಂಕಪಡುವ ಅಗತ್ಯವಿಲ್ಲ. ಇದೇ ಮೊದಲ ಬಾರಿಗೆ 8,000 ರೂ. ಧಾರಣೆಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರಿಗೋ ತೊಗರಿ ಬೆಳಯಲಾಗುತ್ತಿದ್ದು, ರೈತರ ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಲ್ 450 ರೊ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ ಎಂದು ಸಚಿವರು ವಿವರಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ನಾಯಕ ಚೋನಪ್ಪ ಪೂಜಾರಿ, ವಿಜಯಪುರ ಜಿಲ್ಲಾ ನಾಯಕರಾದ ಸಂಗಮೇಶ ಸಾಗರ, ಇರಪ್ಪ ಕುಳೆಮಟಗಿ, ಮಾಳು ಪೂಜಾರಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರೊ, ಎಸ್ ಪಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ, ಕೃಷಿ ಮಾರಾಟ ಮಂಡಳಿ ಸಿಜಿಎಂ ಚಂದ್ರಕಾಂತ ಪಾಟೀಲ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...