ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

Date:

Advertisements

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ತಿಳಿಸಿದರು.

ವಿಜಯಪುರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪರ್ಧೆಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿವೆ. ಜನರನ್ನು ದೋಚುತ್ತ ಒಬ್ಬರ ಮೇಲೊಬ್ಬರು ಆರೋಪ ಹೊರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರುದ್ಯೋಗ ಸೇರಿದಂತೆ ಅನೇಕ ಸಮಸ್ಯೆಗಳು ಹಾಗೂ ಎರಡೂ ಸರ್ಕಾರಗಳ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ಹೋರಾಟ ನಡೆಯಲಿದೆ” ಎಂದರು.

“ಅಡುಗೆ ಅನಿಲ, ಔಷಧಗಳು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್, ಮೆಟ್ರೋ, ನೀರು, ಆಸ್ತಿ ತೆರಿಗೆ ಎಲ್ಲವೂ ದುಬಾರಿಯಾಗಿದೆ. ಆದರೆ, ಕೇವಲ ಅಭಿವೃದ್ಧಿಯ ಹೆಸರಿನಲ್ಲಿ ತೆರಿಗೆ ಹಣವು ಕಾರ್ಪೊರೇಟ್ ಕಂಪನಿಗಳ, ದೊಡ್ಡ ಗುತ್ತಿಗೆದಾರರ, ರಾಜಕಾರಣಿಗಳ ಮತ್ತು ಹಿರಿಯ ಅಧಿಕಾರಿಗಳ ಜೇಬು ಸೇರುತ್ತವೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ನಿಸರ್ಗದಲ್ಲಿ ಹಬ್ಬದ ವಾತಾವರಣ ಸೃಷ್ಟಿ; ನೋಡುಗರ ಮನಸೂರೆಗೊಳಿಸುವ ಗುಲ್​ ಮೊಹರ್

“ರಾಜ್ಯದಲ್ಲಿ 6000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈಬಿಡಿ ಹಾಗೂ ಅವಶ್ಯಕತೆ ಮೂಲಭೂತ ಸೌಲಭ್ಯಗಳನ್ನು ಶಿಕ್ಷಕ ಸಿಬ್ಬಂದಿಯನ್ನು ಒದಗಿಸಬೇಕು. ನಿರುದ್ಯೋಗದಿಂದ ತತ್ತರಿಸುತ್ತಿರುವ ಯುವಜನರಿಗೆ ಉದ್ಯೋಗ ನೀಡಲು ತಕ್ಷಣ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತ್ ಕುಮಾರ್ ಎಚ್ ಟಿ, ಸಿದ್ದರಾಮ ಹಿರೇಮಠ ಹಾಗೂ ಗೀತಾ ಎಚ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X