ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ ಬದಲಾಗಿ ಸ್ವಾವಲಂಬಿಯಾಗುವತ್ತಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ವಿಪಕ್ಷದವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಗೂಗಿಹಾಳ ಗ್ರಾಮದಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿ ಮೆಹಬೂಬಿ ಅಬ್ಬಾಸಲಿ ಚೌಧರಿ ಯೋಜನೆಯ ಹಣ ಉಳಿಸಿ ಶಾಸಕ ಮನಗೂಳಿ ಸೇರಿದಂತೆ ಸಮಸ್ತ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇದು ಗ್ಯಾರಂಟಿ ಯೋಜನೆಯ ಗೆಲುವು ಎಂದು ಶ್ಲಾಘಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ
ಕಾರ್ಯಕ್ರಮದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಶ್ರೀಶೈಲ ಕವಲಗಿ, ಜಿಲ್ಲಾ ಕೆಡಿಪಿ ಸದಸ್ಯ ನೂರ್ ಅಹಮದ್ ಅತ್ತಾರ, ಸುನಂದಾ ಯಂಪುರೆ, ಮಹಾನಂದ ಬಮ್ಮಣ, ಜಯಶ್ರೀ ಹಂದನೂರ, ಗ್ರಾಮ ಪಂಚಾಯತಿ ಅಧ್ಯಕ್ಷ ರಜಾಕ ಚಿಕ್ಕಗಸಿ, ಪರಸು ಬಿಸನಾಳ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಸಿದ್ದು ಹತ್ತಳ್ಳಿ, ಕಾಂತನಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
