ವಿಜಯಪುರ | ವಿದ್ಯಾರ್ಥಿ ಬದುಕೆಂಬುದು ವ್ಯಕ್ತಿತ್ವ ರೂಪಿಸುವ ಕ್ರಿಯಾಶೀಲ ಅವಧಿ: ಸಂಗಮೇಶ ಬಬಲೇಶ್ವರ

Date:

ವಿದ್ಯಾರ್ಥಿ ಬದುಕೆಂಬುದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಕ್ರಿಯಾಶೀಲ ಅವಧಿ. ಇದು ಮಕ್ಕಳ ಮೌಲ್ಯಾತ್ಮಕ ವ್ಯಕ್ತಿತ್ವ ರೂಪಿಸುವ ಕಾಲಘಟ್ಟ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ‌ ವಿಜಯಪುರದಲ್ಲಿ ಹೇಳಿದರು.

- Advertisement -

ವಿಜಯಪುರ ನಗರದ ಕಾಳಿಕಾ ಮಂದಿರದಲ್ಲಿ ಉನ್ನತಿ ವಿದ್ಯಾವರ್ಧಕ ಸಂಘದಿಂದ ಆಯೋಜಿಸಿದ್ದ ಉನ್ನತಿ ಕೋಚಿಂಗ್ ಕ್ಲಾಸ್‌ನ ಸಮಾರೋಪ ಹಾಗೂ ನಿರಂತರ ತರಬೇತಿಯ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಇಂದಿನ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಒಳ್ಳೆಯ ಸಂಸ್ಕಾರ ನೀಡುವುದು ತಂದೆ-ತಾಯಿಗಳ ಮುಖ್ಯ ಆದ್ಯತೆಯಾಗಬೇಕು” ಎಂದು ಹೇಳಿದರು.

ಶಿಕ್ಷಕ ಸಂತೋಷ ಬಂಡೆ ಮಾತನಾಡಿ, “ಮಕ್ಕಳು ಶ್ರಮವಹಿಸಿ ಅಧ್ಯಯನ ಮಾಡುವ ಪ್ರವೃತ್ತಿ ರೂಡಿಸಿಕೊಳ್ಳಬೇಕು.ಸ್ವಾವಲಂಬಿ ಬದುಕಿಗೆ ಅಗತ್ಯವಾದ ಮಾನವಿಯ ಮೌಲ್ಯ ಮತ್ತು ಜೀವನ ಕೌಶಲ್ಯ ಬೆಳಸಿಕೊಳ್ಳಬೇಕು” ಎಂದರು.

ಸಾಹಿತಿ ಆರ್ ಎಸ್ ಪಟ್ಟಣಶೆಟ್ಟಿ ಮಾತನಾಡಿ, “ಮಕ್ಕಳಿಗೆ ಆಚಾರ, ವಿಚಾರ ಕಲಿಸಿ ಉತ್ತಮ ಸಂಸ್ಕಾರ ನೀಡುವ ಜತೆಗೆ ಅಕ್ಷರ ಅಭ್ಯಾಸ ಮಾಡಲು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು. ಪಾಲಕರ ಪ್ರೀತಿ, ವಿದ್ಯಾರ್ಥಿಗಳ ನಿರಂತರ ಪರಿಶ್ರಮದಿಂದ ಖಂಡಿತ ಗುರಿ ತಲುಪಲು ಸಾಧ್ಯ” ಎಂದರು.

ಇದನ್ನೂ ಓದಿದ್ದೀರಾ? ಟ್ರಾಫಿಕ್ ನಿಯಮಗಳಲ್ಲಿ ಈ ತಂತ್ರಜ್ಞಾನ ಬಳಸಿಕೊಂಡರೆ ಮಂಡ್ಯದಂತ ಪ್ರಕರಣ ಮರುಕಳಿಸುವುದಿಲ್ಲ

ವ್ಯವಸ್ಥಾಪಕ ನಿರ್ದೇಶಕ ಸುನಿಲ್‌ ಕುಮಾರ ಆತನೂರ, ಸಂಘದ ಅಧ್ಯಕ್ಷ ಸಂಗಣ್ಣ ಆತನೂರ, ಮಂಜುನಾಥ ಕಾಮಗೊಂಡ, ಪುರುಷೋತ್ತಮ ಗಲಗಲಿ, ಈರಯ್ಯ ಮಠಪತಿ, ಪ್ರಕಾಶ ಬೆನೋರ, ಷಣ್ಮುಗ ಕಲಶೆಟ್ಟಿ, ರಾಜುಗೌಡ, ಗುರಪ್ಪ ಅವಟಿ, ಸುರೇಶ ಕೌಲಗಿ, ಮಲ್ಲಿಕಾರ್ಜುನ ಅತನೂರ, ಮಹೇಶ ಬೆನೋರ, ಓಂಕಾರ ನಾವಿ, ಬಸವರಾಜ ಲಾಳಸಂಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...