ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ವಿಜಯಪುರ ತಾಲೂಕಿನ ಕಗ್ಗೋಡ ವಿದ್ಯಾರ್ಥಿಗಳು ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿ ʼಬೇಕೆ ಬೇಕು ಬಸ್‌ಗಳು ಬೇಕುʼ ಎಂದು ಘೋಷಣೆ ಕೂಗಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಗ್ಗೋಡ ಗ್ರಾಮಸ್ಥರು ಸಾಥ್ ನೀಡಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಬುರ್ಖಾ ಧರಿಸಿ ಬಸ್ ನಿಲ್ದಾಣಕ್ಕೆ ಬಂದ ಪುರುಷ; ಸಾರ್ವಜನಿಕರಿಂದ ತರಾಟೆ
“ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ, ಬರುವ ಕೆಲವು ಬಸ್‌ಗಳು ತುಂಬುವ ಕಾರಣ ಗ್ರಾಮದಲ್ಲಿ ಬಸ್ ನಿಲ್ಲಿಸದೆ ಹಾಗೆಯೇ ತೆರಳುವುದರಿಂದ ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ” ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸರು ಮಧ್ಯ ಪ್ರವೇಶಿಸಿ ಮನವರಿಕೆ ಮಾಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.