ವಿಜಯಪುರ | ಗುಣಮಟ್ಟದ ಶಿಕ್ಷಣದಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಪಿ ಜಿ ಆರ್ ಸಿಂಧ್ಯ

Date:

Advertisements

ಸುಸ್ಥಿರ ಅಭಿವೃದ್ಧಿಯ ಅಂಶಗಳಲ್ಲಿ ಪ್ರಗತಿ ಸಾಧಿಸಬೇಕಾದರೆ ನಾವು ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿಜಿಆರ್ ಸಿಂಧ್ಯ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿಜಯಪುರ ಜಿಲ್ಲಾ ಸಂಸ್ಥೆಗಳು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಪದವಿ ಕಾಲೇಜುಗಳ ಅಧ್ಯಾಪಕರಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಒಂದು ದಿನದ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಾರಂಭಿಕ ಶಿಬಿರ ಉದ್ಘಾಟಿಸಿ ಮಾತನಾಡಿರು.

“ಮಕ್ಕಳಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಮೂಲಕ ಅವರಲ್ಲಿ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಯುವಜನಾಂಗ ನಮ್ಮ ದೇಶದ ಆಸ್ತಿ. ಈ ಯುವ ಸಂಪತ್ತನ್ನು ದೇಶದ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕಾದರೆ ಈ ಶಿಬಿರದಲ್ಲಿ ಭಾಗವಹಿಸಿರುವ ಅಧ್ಯಾಪಕರು ಇಲ್ಲಿ ಪಡೆದಿರುವ ಜ್ಞಾನವನ್ನು ನಿಮ್ಮ ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಆಗ ಮಾತ್ರ ಈ ಶಿಬಿರ ಯಶಸ್ವಿಯಾದಂತಾಗುತ್ತದೆ” ಎಂದು ಹೇಳಿದರು.

Advertisements

“ಪ್ರಸ್ತುತದ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಎನ್‌ಇಪಿ ಜಾರಿಗೊಳಿಸಿದ್ದು, ಇದಕ್ಕೆ ಬದಲಾಗಿ ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಂಟಾಗಿರುವ ಗೊಂದಲದ ವಾತಾವರಣವನ್ನು ಆದಷ್ಟು ಬೇಗ ತಿಳಿಗೊಂಡು ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬೇಕು” ಎಂದು ಒತ್ತಾಯಿಸಿದರು.

ಮುಖ್ಯ ಅತಿಥಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಮಹಿಳಾ ವಿವಿ ವ್ಯಾಪ್ತಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಬಲಪಡಿಸಲು ಅಗತ್ಯವಿರುವ ಕ್ರಮ ಕೈಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಬಿ ಕೆ ತುಳಸಿಮಾಲ ಮಾತನಾಡಿ, “ಮಾನವ ಸಂಪನ್ಮೂಲ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿಗೆ ಸಾಧ್ಯವಾಗುತ್ತದೆ. ಹಾಗಾಗಿ ಎಲ್ಲರನ್ನೂ ಒಳಗೊಳ್ಳುವ ಶಿಕ್ಷಣ ನೀಡುವ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಅಗತ್ಯ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಬೇಕಿದೆ” ಎಂದರು.

“ಯುವಜನರ ಸಬಲೀಕರಣ ಮಾಡುವಲ್ಲಿ ಶಿಕ್ಷಣ ಪಾತ್ರ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ಮತ್ತು ಚಾರಿತ್ರ್ಯ ನಿರ್ಮಾಣ ಮಾಡಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಶ್ರೀರಾಮಸೇನೆ ದತ್ತಮಾಲಾ ಅಭಿಯಾನ; ಪ್ರವಾಸಿತಾಣಗಳಿಗೆ 3 ದಿನ ನಿರ್ಬಂಧ

“ಸುಸ್ಥಿರ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಜೀವನ ಕೌಶಲ್ಯಗಳು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಎಸ್‌ಎಸ್‌ ಕಾರ್ಯ ಚಟುವಟಿಕೆಗಳು ಸಹಕಾರಿಯಾಗಿದ್ದು, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಈ ಮೌಲ್ಯಗಳು ನೆರವಾಗುತ್ತವೆ” ಎಂದು ಪ್ರೊ.ತುಳಸಿಮಾಲ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್‌ನ ವಿಜಯಪುರ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಪ್ರೊ.ಸತೀಶ್‌ ಜಿಗಜಿನ್ನಿ, ಜಿಲ್ಲಾ ಪ್ರಧಾನ ಆಯಕ್ತ ಸಿದ್ದಣ್ಣ ಎಂ ಸಕ್ರಿ, ಶರಣು ಸಬರದ, ಮಹಿಳಾ ವಿವಿ ಭಾರತ್ ಸೌಟ್ಸ್ ಮತ್ತು ಗೈಡ್ಸ್‌ನ ನೋಡಲ್ ಅಧಿಕಾರಿ ಡಾ.ಶ್ರೀನಿವಾಸ, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಮಲ್ಲೇಶ್ವರಿ ಜುಚಾರೆ, ಸಂಪನ್ಮೂಲ ವ್ಯಕ್ತಿ ಲತಾ ಮಂಜುನಾಥ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X