ವಿಜಯಪುರ | ನೆಟ್, ಕೆಸೆಟ್ ಯಶಸ್ಸಿಗೆ ಕ್ರಮಬದ್ಧ ಸಿದ್ಧತೆ ಅಗತ್ಯ: ವಿಜಯಾ ಕೋರಿಶೆಟ್ಟಿ

Date:

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನಾ ವೃತ್ತಿ ಮತ್ತು ಸಂಶೋಧನಾ ಅವಕಾಶಗಳಿಗೆ ನೆಟ್/ಕೆಸೆಟ್ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ನೆಟ್/ಕೆಸೆಟ್ ಪರೀಕ್ಷೆಗಳ ಮಹತ್ವ ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಲು ನೆಟ್/ಕೆಸೆಟ್ ಪರೀಕ್ಷೆಗಳ ಕುರಿತು ಸ್ಪಷ್ಟ ಅರಿವು ಮತ್ತು ಸಮರ್ಪಕ ಸಿದ್ಧತೆ ಹೊಂದುವುದು ಅಗತ್ಯ ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ, ಕಲಬುರಗಿಯ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಸಮೀನಾ ಸಿಂದಗೀಕರ್ ಮಾತನಾಡಿ, ಕ್ರಮಬದ್ಧ ಅಧ್ಯಯನ, ಹಿಂದಿನ ಪ್ರಶ್ನೆಪತ್ರಿಕೆಗಳ ಅಭ್ಯಾಸ ಹಾಗೂ ಸಮಯ ನಿರ್ವಹಣೆಯ ಮೂಲಕ ನೆಟ್/ಕೆಸೆಟ್ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ. ಎಂ.ಪಿ. ಬಳಿಗಾರ ವಹಿಸಿದ್ದರು. ಕಾರ್ಯಕ್ರಮದದಲ್ಲಿ ಸಮಾಜಶಾಸ್ತ್ರ ವಿಭಾಗದ ಎಂ.ಎ. ಪದವಿಯಲ್ಲಿ ಐದು ಚಿನ್ನದ ಪದಕಗಳನ್ನು ಪಡೆದ ಹಾಗೂ ಇತ್ತೀಚೆಗೆ ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಸಬಾ ಕುಡಚಿ ಅವರನ್ನು ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಮತ್ತು ಪ್ರೊ. ಎಂ.ಪಿ. ಬಳಿಗಾರ ಅವರು ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಡಾ. ರಶ್ಮಿ ಗು. ವಂಶಾಕೃತಮಠ ಕಾರ್ಯಕ್ರಮ ನಿರೂಪಿಸಿದರು. ಡಾ.ಇಂದಿರಾಗಾಂಧಿ ಕೊಂಡಗೂಳಿಕರ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿನಿ ನೀತು ಪರಿಚಯಿಸಿದರು. ಸುಧಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...