ವಿಜಯಪುರ | SIR ಯಶಸ್ವಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಿ: ಡಾ. ಆನಂದ ಕೆ

Date:

ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ನ್ಯಾಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯ ಜೂ.20 ರಿಂದ ಪ್ರಾರಂಭವಾಗಲಿದ್ದು, ಅಷ್ಟರೊಳಗಾಗಿ, ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವುದು ಅತಿ ಅವಶ್ಯಕವಾಗಿದ್ದು, ಇದರ ಪೂರ್ವಭಾವಿಯಾಗಿ ತಾಲೂಕಾವಾರು ತರಬೇತುದಾರರಿಗೆ ತರಬೇತಿಯನ್ನು ಏರ್ಪಡಿಸಲಾಗಿದೆ, ಇಲ್ಲಿ ಪೂರ್ಣ ಪ್ರಮಾಣದ ತರಬೇತಿ ಪಡೆದುಕೊಂಡು ಪರಿಣಾಮಕಾರಿಯಾಗಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಬೇಕು” ಎಂದರು.

“2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯ ಕೈಗೊಳ್ಳುವ ಕುರಿತು ಈಗಾಗಲೇ ಹಲವಾರು ಬಾರಿ ವಿಡಿಯೋ ಸಂವಾದಗಳ ಮೂಲಕ, ಸಭೆಗಳನ್ನು ಜರುಗಿಸುವುದರ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ಸೂಚಿಸಲಾಗಿದ್ದು, ಮ್ಯಾಪಿಂಗ್ ಕಾರ್ಯವು ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಅತೀ ಮಹತ್ವಾದ್ದಾಗಿದ್ದು, ಈ ನಿಟ್ಟಿಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಶೇ.90 ಕ್ಕಿಂತ ಹೆಚ್ಚಿನ ಪ್ರಗತಿ ಸಾಧಿಸಬೇಕು” ಎಂದು ತಿಳಿಸಿದರು.

“ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು, ಬಿಎಲ್‌ಒ ಫೆಸಿಲೇಶನ್ ಕೇಂದ್ರ ಮತ್ತು ಮತದಾರರ ಫೆಸಿಲಿಟೇಶನ್ ಕೇಂದ್ರಗಳನ್ನು ಸ್ಥಾಪಿಸಲು, ರಾಜಕೀಯ ಪಕ್ಷಗಳ ಸಭೆ ಕರೆದು ಅವರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ತಿಳುವಳಿಕೆ ನೀಡಬೇಕು ಎಂದರು, ಮತಗಟ್ಟೆ ಅಧಿಕಾರಿಗಳಿಗೆ ನೀಡಿದ ಗಣತಿ ಫಾರ್ಮ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಹಿಂದಿರಿಗಿಸಿದ ಬಗ್ಗೆ ಪರಿಶೀಲಿಸಲು, ಮತ್ತು ಹಿಂದಿರುಗದ ಗಣತಿ ಫಾರ್ಮ್‌ಗಳ ಕುರಿತು ವಿಚಾರಣೆಯನ್ನು ಕೈಗೊಳ್ಳಲು ಮತ್ತು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪೂರ್ವದಲ್ಲಿ ಮುನ್ನೆಚ್ಚರಿಕೆಗಳನ್ನು ವಹಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಮತಕ್ಷೇತ್ರದ ತರಬೇತುದಾರರಿಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಉಪನ್ಯಾಸಕರಾದ ಮಹಾವೀರ ರಜಪೂತ ಹಾಗೂ ಆರ್.ಸಿ. ಹಿರೇಮಠ ಅವರು ತರಬೇತಿ ನೀಡಿದರು.

ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಔದ್ರಾಮ, ಮತದಾರರ ನೋಂದಣಾಧಿಕಾರಿಗಳಾದ ಮ ರಾಜಶೇಖರ ಡಂಬಳ, ವಿನಯ ಪಾಟೀಲ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ ಸೇರಿದಂತೆ ವಿಜಯಪುರ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲೆಯ ಎಲ್ಲ ತಹಶೀಲದಾರರು ಮತ್ತು ಮತಕ್ಷೇತ್ರದ ತರಬೇತುದಾರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...