ವಿಜಯಪುರ | ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮವಹಿಸಿ; ಶಾಸಕ ಮನಗೂಳಿ

Date:

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಿಂದಗಿ ಮತ್ತು ಆಲಮೇಲ ತಾಲೂಕಿನ ಆಯಾ ಗ್ರಾಮ ಪಂಚಾಯತಿ ಪಿಡಿಒ, ಮೇಲಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ಸಿಂದಗಿ ಮತ್ತು ಆಲಮೇಲ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜೂನ್ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಒಂದು ವೇಳೆ ಕರ್ತವ್ಯ ಲೋಪ ಎಸಗಿದರೆ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಗ್ರಾಪಂ ವ್ಯಾಪ್ತಿಯಲ್ಲಿ ಯಾವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿ. ಎಲ್ಲಿ ಕೊಳವೆಬಾವಿ ಕೊರೆಸುವ ಅವಶ್ಯಕತೆಯಿದೆ ಅದರ ಬಗ್ಗೆ ಪಟ್ಟಿ ತಯಾರಿಸಿ ನೀಡಿ. ಯಾವ ಹಳ್ಳಿಗಳಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿಲ್ಲ ಅದರ ಬಗ್ಗೆ ತಾಪಂ ಇಒ ಅವರಿಗೆ ಲಿಖಿತ ರೂಪದಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಬೇಕು. ಜೆಜೆಎಂ ಕಾಮಗಾರಿಯಲ್ಲಿ ಎಷ್ಟು ಮನೆಗಳಿಗೆ ಮಂಜೂರಾತಿ ನೀಡಿದೆ. ಎಷ್ಟು ಮನೆಗಳಿಗೆ ನಳದ ಸಂಪರ್ಕ ಒದಗಿಸಿದ್ದಾರೆ. ಎಷ್ಟು ಬಿಲ್ ಪಾವತಿಯಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ” ಎಂದು ಸೂಚಿಸಿದರು.

“ಸಿಂದಗಿ ಮತ್ತು ಆಲಮೇಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ತೆಗೆದುಕೊಳ್ಳಲಾಗಿದೆ. ಮುಂಬರುವ ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರದಲ್ಲಿ ಪುನಃ ಸಿಂದಗಿ ಮತ್ತು ಆಲಮೇಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪಿಡಿಒ ಹಾಗೂ ಸಂಬಂಧಿಸಿದವರಿಗೆ ಸಭೆ ನಡೆಸಲಾಗುವುದು. ಒಟ್ಟಾರೆ 2-3 ತಿಂಗಳು ಜೊತೆಗೂಡಿ ಜನರ ಸಂಪರ್ಕದಲ್ಲಿದ್ದು ಎಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ ಅಲ್ಲಿ ಸಮಸ್ಯೆ ಪರಿಹರಿಸೋಣ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಸಿಂದಗಿ ತಾಪಂ ಇಒ ರಾಮು ಅಗ್ನಿ, ಆಲಮೇಲ ತಾಪಂ ಇಒ ಪಠಾಣ, ಸಿಂದಗಿ ತಹಶೀಲ್ದಾರ್ ಡಾ. ಪ್ರದೀಪ ಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ್ ವಿಜಯಕುಮಾರ ಕೆ, ಸಿಂದಗಿ ಗ್ರೇಡ್ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ತಾರಾನಾಥ ರಾಠೋಡ, ಕೆಡಿಪಿ ಸದಸ್ಯ ಮಹಾನಂದ ಬಮ್ಮಣ್ಣಿ, ಜಿಪಂ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ ಸೇರಿದಂತೆ ಪಿಡಿಒ ಹಾಗೂ ತಾಪಂ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಪ್ರಜಾಸೇವಾ ಆಂದೋಲನ ಸಭೆಯಲ್ಲಿ 116ಕ್ಕೂ ಅಧಿಕ ಅರ್ಜಿ ಸ್ವೀಕಾರ

ಜನಸಾಮಾನ್ಯರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಆಲಿಸಿ, ನಿಗದಿತ ಕಾಲಮಿತಿಯೊಳಗೆ ತ್ವರಿತವಾಗಿ...

ಗದಗ | ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲಾ ಪ್ರವಾಸ

ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ...

ಉಡುಪಿ | ಬಿಜೆಪಿಯವರಿಂದಲೇ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅಪೂರ್ಣ: ರಿಝ್ವಾನ್ ಅರ್ಷದ್

ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ...