ವಿಜಯಪುರ | ಕಬ್ಬು ಬೆಳೆಗಾರರಿಗೆ ಆಗುವ ಅನ್ಯಾಯ ಖಂಡಿಸಿ ಹೋರಾಟ ನಿರ್ಧಾರ

Date:

ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದ್ದು, ಜ. 20 ರಂದು ರಾಜ್ಯದ ವಿವಿಧ ಜಿಲ್ಲೆಯ ರೈತರೊಂದಿಗೆ ಎಪಿಎಂಸಿ ಸಚಿವ ಶಿವಾನಂದ್ ಪಾಟೀಲ್ ಅವರ ಮನೆಗೆ ಮುತ್ತಿಗೆ ಹಾಕಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ – ಹಸಿರು ಸೇನೆ ರಾಜ್ಯಾಧ್ಯಕ್ಷ  ಚೂನ್ನಪ್ಪ ತಿಳಿಸಿದರು.

- Advertisement -

ವಿಜಯಪುರ ಪಟ್ಟಣದ  ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಕಬ್ಬು ಬೆಳೆಗಾರರ ಹಿತ ರಕ್ಷಣೆ ಕಾಪಾಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ತೊಂದರೆಯಾಗುತ್ತಿದೆ. ಕಬ್ಬು ಬೆಳೆಗಾರರಿಗೆ ವಿವಿಧ ರೀತಿ ಮೋಸ ಆಗುತ್ತಿರುವುದನ್ನು ಖಂಡಿಸುತ್ತೇವೆ. ಚಳಿಗಾಲದ ಅಧಿವೇಶನದ ಸಮಯದಲ್ಲಿ ಸಚಿವ ಶಿವಾನಂದ ಪಾಟೀಲ ಹಾಗೂ ಸಿಎಂ ಸಭೆ ಮಾಡಿ, ಎಲ್ಲಾ ರೈತರ ಸಮಕ್ಷಮದಲ್ಲಿ ಕಬ್ಬಿಗೆ ಯೋಗ್ಯ ಬೆಲೆ ನಿಡುವುದಾಗಿ ಹಾಗೂ ಸಕ್ಕರೆ ಕಾರ್ಖಾನೆಯಲ್ಲಿನ ಅನ್ಯಾಯವನ್ನು ತಡೆಯುವುದಾಗಿ ಭರವಸೆ ನೀಡಿದ್ದರು. ತಿಂಗಳಾದರೂ ಈ ಬಗ್ಗೆ ಕೆಲಸವಾಗಿಲ್ಲ. ಕೊಟ್ಟ ಮಾತು ತಪ್ಪಿದ್ದಾರೆ” ಎಂದು ಆರೋಪಿಸಿದರು.

“ಈ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ. 20 ರಾಜ್ಯದ ವಿವಿಧ ಜಿಲ್ಲೆಯ ಸಾವಿರಾರು ರೈತರು ಸಚಿವ ಶಿವಾನಂದ ಪಾಟೀಲರ ಮನೆ ಮುಂದೆ ಧರಣಿ ಸತ್ಯಾಗ್ರಹ ಮಾಡಲು ನಿರ್ಧರಿಸಲಾಗಿದೆ” ಎಂದರು.

ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ವಿಜಯಪುರ ಎಪಿಎಂಸಿ ಕಾರ್ಯದರ್ಶಿ ಹುದ್ದೆ ಭರ್ತಿ ಮಾಡಬೇಕು. ಎಪಿಎಂಸಿಯಲ್ಲಿ ತರಕಾರಿಗೆ ಶೇಕಡ 10 ಕಮಿಷನ್, ಪ್ಯಾಕಿಂಗ್ ಹಾಗೂ ಅಮಾಲಿ ಕಟ್ ಮಾಡುತ್ತಿದ್ದನ್ನು ಕೊಡಲಿ ನಿಲ್ಲಿಸಬೇಕು. ಖಾಲಿ ಚೀಲ, ಅಮಾಲಿ ಸೂಟ್, ಜಕಾತಿ ಎಂದು ರೈತರಿಗೆ ಮೋಸ ಮಾಡುತ್ತಿರುವುದು ನಿಲ್ಲಿಸಬೇಕು, ದ್ರಾಕ್ಷಿ ಹರಾಜು ಪ್ರಕ್ರಿಯೆಲ್ಲಿಯೂ ಯಥೇಚ್ಛವಾಗಿ ತೋರಾಡುತ್ತ ರೈತರಿಗೆ ಮೋಸ ಮಾಡಲಾಗುತ್ತಿದೆ. ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳಲ್ಲಿ ರೈತರಿಗೆ ಸಭೆ, ತರಬೇತಿ, ಸಿಬಿರ ಮಾಡಲು ಒಳ್ಳೆಯ ಎರಡುನೂರು ಆಸನಗಳ ರೈತ ಭವನ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ : ಶಾಸಕ ಪ್ರಭು ಚವ್ಹಾಣ

ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ, ಕಾರ್ಯಧ್ಯಕ್ಷ ಮಹೇಶ ಗೌಡ ಸುಬೇದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹದೇವಪ್ಪ ತೇಲಿ, ತಿಕೋಟ ತಾಲೂಕು ಅಧ್ಯಕ್ಷ ಸಾತ ಲಿಂಗಯ್ಯ ಸಾಲಿಮಠ, ಪ್ರಕಾಶ್ ತೇಲಿ, ಸಂಗಪ್ಪ ಟಕ್ಕೆ, ಜಕರಾಯ ಪೂಜಾರಿ, ಮಹಾಂತೇಶ್ ಮಮದಾಪುರ, ಮಹಾದೇವ ಬನಸೋಡೆ, ಜಯಸಿಂಹ ರಜಪೂತ, ರಾಜ ಸಾಬ್ ನದಾಫ್, ಹನುಮೇಶ ಜಮಖಂಡಿ, ಆತ್ಮಾನಂದ ಬೈ ರೋಡಗಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...