ವಿಜಯಪುರ | ಮಗಳನ್ನು ಪ್ರೀತಿಸಿದ್ದ ಯುವಕನಿಗೆ ಬೆಂಕಿ ಹಚ್ಚಿದ ಯುವತಿ ಕುಟುಂಬ; ಆರೋಪ

Date:

ಮಗಳನ್ನು ಪ್ರೀತಿಸಿದ್ದ ಯುವಕನ ಮೇಲೆ ಯುವತಿಯ ಕುಟುಂಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಘಟನೆ ಸೋಮವಾರ ರಾತ್ರಿ ನಡೆದಿದ್ದು, ಯುವಕ ರಾಹುಲ್ ಬಿರಾದಾರ್​ಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಕೃತ್ಯ ಎಸಗಿದ ಆರೋಪಿಗಳಿಗೆ ಕೆಲ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ನಗರದ ರಾಹುಲ್ ಮತ್ತು ಯುವತಿ ಐಶ್ವರ್ಯ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿ ಕುಟುಂಬಕ್ಕೆ ತಿಳಿದು, ರಾಜಿ ಪಂಚಾಯತಿ ನಡೆಸಿದ್ದರು. ಪೋಷಕರ ಮಾತಿನಂತೆ ಇಬ್ಬರು ದೂರವಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಬೇಸರಗೊಂಡಿದ್ದ ಯುವಕ ಆಗ್ಗಾಗ್ಗೆ ಯುವತಿಯ ಮನೆ ಬಳಿ ಓಡಾಡುತ್ತಿದ್ದ. ಆತನಿಗೆ ಕರೆ ಮಾಡಿದ್ದ ಯುವತಿ, ಮನೆ ಎದುರು ಬಾರದಂತೆ ಕೇಳಿದ್ದಳು. ಅದಾಗ್ಯೂ, ಮಾತಿಗೆ ಮಾತು ಬೆಳೆದು, ನಿನ್ನ ಮನೆಗೆ ಬರುತ್ತೇನೆಂದ ರಾಹುಲ್, ಐಶ್ವರ್ಯ ಮನೆಗೆ ಹೋಗಿದ್ದಾನೆ.

ಈ ವೇಳೆ, ರಾಹುಲ್ ಮೇಲೆ ಯುವತಿಯ ತಂದೆ ಅಪ್ಪು ಮದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ರಾಹುಲ್‌ಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ, ಯುವತಿಯ ತಂದೆ, ಚಿಕ್ಕಪ್ಪ, ಚಿಕ್ಕಮ್ಮಗೂ ಸುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ, ಯುವಕನೇ ಪೆಟ್ರೋಲ್ ತಂದು, ತಮ್ಮ ಮಗಳಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಎಂದು ಯುವತಿಯ ಕುಟುಂಬವೂ ಆರೋಪಿಸಿದೆ. ಎರಡೂ ಕುಟುಂಬದ ಸದಸ್ಯರು ಪರಸ್ಪರ ವಿರುದ್ಧ ದೂರು ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿದ್ಯೆಗೆ ಸರಿಯಾದ ಉದ್ಯೋಗವಿಲ್ಲದ ಯುವಕರು ಹಾದಿ ತಪ್ಪಿರುವ ನಿದರ್ಶನಗಳು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 371(ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂವಿಧಾನದಲ್ಲಿ ನೀಡಲಾಗಿರುವ 371(ಜೆ) ಅನುಷ್ಠಾನಕ್ಕೆ ಆಗ್ರಹಿಸಿ 371(ಜೆ)...

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ...

ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ....

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ...