ವಿಜಯಪುರ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸಿಎಂಗೆ ಮಾದಿಗ ಹೋರಾಟ ಸಮಿತಿ ಮನವಿ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಜನ ಸಂಘ ಹೋರಾಟ ಸಮಿತಿಯು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

- Advertisement -

“ಅಸಮಾನತೆಯ ಸಂತ್ರಸ್ತರಾದ ಮಾದಿಗರು, ದಲಿತರು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ 30 ವರ್ಷಗಳ ತ್ಯಾಗ ಬಲಿದಾನದಿಂದ ಸಾವು ನೋವುಗಳನ್ನು ಅನುಭವಿಸಿ ನಿರಂತರವಾಗಿ ಹೋರಾಟ ಮಾಡಿದ ಪರಿಣಾಮ ಸುಪ್ರೀಂ ನ್ಯಾಯಾಲಯವು ಒಳ ಮೀಸಲಾತಿ ಪರವಾದ ತೀರ್ಪು ನೀಡಿದೆ. ಮಾದಿಗ ಸಮುದಾಯದ ಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳು ತಮ್ಮ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂಬುದಾಗಿ ಆಶ್ವಾಸನೆ ಮಾತ್ರ ನೀಡು ಸುಮ್ಮನಾಗಿವೆ” ಎಂದು ಸಮಿತಿಯ ಪದಾಧಿಕಾರಿಗಳು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

‌”ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು. ನಾ. ನಾಗಮೋಹನ್ ದಾಸ್‌ರವರ ಸಮಿತಿಗೆ ಈ ಹಿಂದೆ 7 ವರ್ಷಗಳ ಕಾಲ ಅಧ್ಯಯನ ನಡೆಸಿದ ನ್ಯಾಯಮೂರ್ತಿ ಎ ಜೆ ಸದಾಶಿವರ ಆಯೋಗದ ದತ್ತಾಂಶಗಳಿರುವ ವರದಿಯ ಶಿಫಾರಸ್ಸುಗಳನ್ನು ಬಳಸಿಕೊಂಡು ವರದಿ ತಯಾರಿಸಲು ಸರ್ಕಾರ ಆದೇಶ ನೀಡಬೇಕು. ಮಾದಿಗ, ಸಮಗಾರ, ಡೊಹರ, ದಕ್ಕಲಿಗ, ಮಚ್ಚಗಾರ, ಮತ್ತು ಇತರೆ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗದಿರುವ ಕಾರಣ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿಯುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾಲುವೆಗೆ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ

ಈ ವೇಳೆ ಕರ್ನಾಟಕ ಮಾದಿಗ ಜನಸಂಘ ಹೋರಾಟ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಪರಶುರಾಮ ರೋಣಿಹಾಳ, ರಾಜ್ಯ ಉಪಾಧ್ಯಕ್ಷ ಸದಾನಂದ ಗುನ್ನಾಪುರ, ರಾಜ್ಯ ಕಾರ್ಯದರ್ಶಿ ದಶರಥ ಹೊನ್ನಳ್ಳಿ, ಜಿಲ್ಲಾಧ್ಯಕ್ಷ ಎಂ ಆರ್ ದೊಡ್ಡಮನಿ, ಯುವ ಘಟಕದ ರಾಜ್ಯಾಧ್ಯಕ್ಷ ನಾಗರಾಜ ಮಾದರ, ಜಿಲ್ಲಾ ಉಪಾಧ್ಯಕ್ಷ ಸಾಗರ ಪೂಜಾರಿ, ವಿಠ್ಠಲರಾಜ ಸಂದರಮನಿ, ಧರ್ಮರಾಜ ಹೊಸುರ, ಕೃಷ್ಣ ಬಾನಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...