ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

Date:

ವೃತ್ತಿಪರ, ತಾಂತ್ರಿಕ ಹಾಗೂ ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಮಹಿಳೆಯರ ಪ್ರವೇಶವನ್ನು ವಿಸ್ತರಿಸುವುದು, ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆಗಳನ್ನು ತರಿಸುವುದು ಹಾಗೂ ಸ್ಕಿಲ್ ಕೋರ್ಸುಗಳಲ್ಲಿ ವಿದ್ಯಾರ್ಥಿನಿಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಇಂದಿನ ಅಗತ್ಯವೆಂದು ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ. ಬಿ ಸೋನಾರ್ ಹೇಳಿದರು.

- Advertisement -

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ಲೇಸ್‌ಮೆಂಟ್ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗು ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರಧಾನಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ ಪಿಎಂ ಉಷಾ ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಪರಿಷತ್ತಿನ ಅನುದಾನದೊಂದಿಗೆ ಹಮ್ಮಿಕೊಂಡಿದ್ದ ಮಹಿಳೆಯರಿಗೆ ವೃತ್ತಿಪರ, ತಾಂತ್ರಿಕ ಮತ್ತು ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಪ್ರವೇಶವನ್ನು ಸುಲಭಗೊಳಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಜಯಪುರದ ಎಸ್.ಬಿ. ಆರ್ಟ್ಸ್ ಮತ್ತು ಕೆ.ಸಿ.ಪಿ. ಸೈನ್ಸ್ಕಾಲೇಜಿನ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀಧರ್ ಜೋಶಿ ಮಾತನಾಡಿ, ಇಂದಿನ ಜಗತ್ತು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದೆ. ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್, ಸೈಬರ್ ಸುರಕ್ಷತೆ, ಕ್ಲೌಡ್ ಕಂಪ್ಯೂಟಿಂಗ್, ಇಂಟರ್ನೆಟ್ ಆಫ್ ಥಿಂಗ್ಸ್ ಮುಂತಾದ ಉದಯೋನ್ಮುಖ ತಂತ್ರಜ್ಞಾನಗಳು ನಮ್ಮ ಜೀವನಶೈಲಿ ಹಾಗೂ ಉದ್ಯೋಗಕ್ಷೇತ್ರವನ್ನು ವೇಗವಾಗಿ ಬದಲಾಯಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಾಂತ್ರಿಕ ಮೂಲಾಧಾರಗಳನ್ನು ಗಟ್ಟಿಗೊಳಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಹೇಳಿದರು.

ಇದನ್ನೂ ಓದಿ ಧಾರವಾಡ | ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಕಾರ್ಯಕ್ರಮದ ಸಂಯೋಜಕ ಡಾ. ಸಿ. ಎಂ. ಮಠಪತಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ತ ಪ್ರೊ. ಎಂ. ಪಿ. ಬಳಿಗಾರ್, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಉಪಸ್ಥಿತರಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...