ವಿಜಯಪುರ | ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂರಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ!

Date:

ಡೀಸೆಲ್ ಹಾಕಿಸಿದ್ದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್​ನಲ್ಲಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಕೂರಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

- Advertisement -

“ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಮೌನೇಶ್ ಪತ್ತಾರ್ ಎಂಬಾತ ಅಂದಾಜು 10 ರಿಂದ 15 ಲಕ್ಷ ರೂ.ನಷ್ಟು ಬಾಕಿ ಹಣ ನೀಡಬೇಕಿತ್ತು. ಆ ಹಣವನ್ನು ಪಾವತಿಸುವಂತೆ ಒತ್ತಾಯಿಸಿದ ಆತನನ್ನು ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕಳೆದ 12 ದಿನಗಳಿಂದ ಅರೆಬೆತ್ತಲೆಯಾಗಿ ಕೂಡಿಹಾಕಿದ್ದಾರೆ” ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತಮಿಳುನಾಡು ಮೂಲದ ಶಿವಶಕ್ತಿ ಬೋರ್‌ವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ್, ವಾಹನಗಳಿಗೆ ಬೋಸಲೆ ಅವರ ಬಂಕ್‌ನಲ್ಲಿ ಡೀಸೆಲ್ ಹಾಕಿಸುತ್ತಿದ್ದರು. ಆದರೆ, ಶಿವಶಕ್ತಿ ಬೋರ್‌ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಮೌನೇಶ್‌ನನ್ನು ಪೆಟ್ರೋಲ್ ಬಂಕ್ ಮಾಲೀಕ ಹಿಡಿದುಕೊಂಡಿದ್ದು, ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ್ ಬಿಡುಗಡೆಗಾಗಿ ಆಗ್ರಹಿಸಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್‌ನಲ್ಲೇ ಕುಳಿತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪ್ರವಾಹ ಸಂತ್ರಸ್ತೆ

ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರ್‌ನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೆ ಬಂಕ್ ಮಾಲೀಕರು ಮೌನೇಶ್ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...