ವಿಜಯಪುರ | ಅಭಿವೃದ್ಧಿಗೆ ಸಂಖ್ಯಾಶಾಸ್ತ್ರದ ಶಕ್ತಿ ಅನಿವಾರ್ಯ: ಜ್ಯೋತಿ ದೇಶಪಾಂಡೆ

Date:

ಅಭಿವೃದ್ಧಿ ಯೋಜನೆಯ ಯಶಸ್ಸಿಗೆ ನಿಖರವಾದ ಅಂಕಿ ಅಂಶಗಳು ಮತ್ತು ವೈಜ್ಞಾನಿಕ ದತ್ತಾಂಶವೇ ಆಧಾರವಾಗಿದ್ದು, ಅದಕ್ಕೆಂದೇ ಸಮರ್ಪಕ ಅಂಕಿ ಅಂಶಗಳನ್ನೊಳಗೊಂಡ ಯೋಜನೆ ರೂಪಿಸಿ ಕಾರ್ಯ ನಿರ್ವಹಿಸಿದಾಗ ಮಾತ್ರವೇ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಜ್ಯೋತಿ ರಾಮಚಂದ್ರ ದೇಶಪಾಂಡೆ ಹೇಳಿದರು.

- Advertisement -

ವಿಜಯಪುರ ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಖ್ಯಿಕ ತಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಜನ್ಮ ದಿನದ ಅಂಗವಾಗಿ 20ನೇ ಸಾಂಖ್ಯಿಕ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಆಡಳಿತಾತ್ಮಕ ದತ್ತಾಂಶದ ಸಾಮರ್ಥ್ಯ ಅನಾವರಣ ಎಂಬ ಧ್ಯೇಯವಾಕ್ಯದಡಿ ಈ ವರ್ಷ ಸಾಂಖ್ಯಿಕ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

ಬಬಲೇಶ್ವರ ತಾಲ್ಲೂಕು ಯೋಜನಾಧಿಕಾರಿ ಎಸ್‌ ಬಿ ಪಾಟೀಲ್‌ ಮಾತನಾಡಿ, “ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಖ್ಯಾಶಾಸ್ತ್ರ ಇಲಾಖೆಯ ಪಾತ್ರ ಮಹತ್ವದ್ದಾಗಿದೆ” ಎಂದರು.

ವಿವಿಎಸ್ ಮಹಾವಿದ್ಯಾಲಯದ ಸಂಖ್ಯಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಆನಂದ ಕುಲಕರ್ಣಿ ಮಾತನಾಡಿ, ದೈನಂದಿನ ಜೀವನದಲ್ಲಿ ಸಂಖ್ಯಾಶಾಸ್ತ್ರದ ಬಳಕೆ, ದತ್ತಾಂಶದ ವಿಶ್ಲೇಷಣೆಯ ಮೂಲಕ ಉತ್ತಮ ಆಡಳಿತ ಹಾಗೂ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವ ವಿಧಾನಗಳನ್ನು ನೈಜ ಉದಾಹರಣೆಗಳೊಂದಿಗೆ ವಿವರಿಸಿದರು. ಸರ್ಕಾರದ ವಿವಿಧ ಯೋಜನೆಗಳ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ದತ್ತಾಂಶದ ಮಹತ್ವದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕರಾದ ಅಲ್ತಾಫ್ ಅಹ್ಮದ್ ಬಾಶಾಲಾಲ ಮಣಿಯಾರ ಮಾತನಾಡಿ, ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಜೀವನ ಸಾಧನೆಗಳು ಹಾಗೂ ಭಾರತೀಯ ಸಂಖ್ಯಾಶಾಸ್ತ್ರ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಪರಿಚಯಿಸಿದರು.

ನಿವೃತ್ತ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಸಿ.ಎಸ್. ಕಟ್ಟಿ ಅವರು ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡು, ಇಲಾಖೆಯ ಬೆಳವಣಿಗೆ ಹಾಗೂ ಸಂಖ್ಯಾಶಾಸ್ತ್ರದ ಪ್ರಾಮುಖ್ಯತೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...