ವಿಜಯಪುರ | ಪಂಪನಿಂದ ಮುಷ್ತಾಕ್‌ವರೆಗೆ ಕನ್ನಡದ ಶ್ರೀಮಂತಿಕೆ ಹಬ್ಬಿದೆ: ಶಂಕರಗೌಡ ಸೋಮನಾಳ

Date:

ಕನ್ನಡ ಭಾಷೆಗೆ 2,000 ವರ್ಷಗಳ ದೀರ್ಘ ಮತ್ತು ಶ್ರೀಮಂತ ಇತಿಹಾಸವಿದೆ. ಪಂಪನಿಂದ ಬಾನು ಮುಷ್ತಾಕ್‌ವರೆಗೆ ಅನೇಕ ಸಾಹಿತಿಗಳು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

- Advertisement -

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಎಲ್ ಲಕ್ಕಣ್ಣವರ ಮಾತನಾಡಿ, “ಕರ್ನಾಟಕದ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದಲ್ಲಿ ಮಾತನಾಡುವುದು, ಕನ್ನಡದಲ್ಲಿ ಬರೆಯುವುದು ಮತ್ತು ಕನ್ನಡ ಗ್ರಂಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಾಗ ಮಾತ್ರ ನಾಡು–ನುಡಿ–ಭಾಷೆ ನಿಜವಾಗಿಯೂ ಬೆಳೆಯಲು ಸಾಧ್ಯ” ಎಂದು ಹೇಳಿದರು.

ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾರಾಯಣ ಬಿ ಪವಾರ ಮಾತನಾಡಿ, ಹಳೆಗನ್ನಡದ ಹಲವು ಪದ್ಯಗಳನ್ನು ಉದಾಹರಣೆಯಾಗಿ ವಾಚಿಸಿ, ವಿವಿಧ ಕಾಲಘಟ್ಟಗಳ ಕವಿಗಳು ಮತ್ತು ಕೃತಿಗಳನ್ನು ಪರಿಚಯಿಸುವ ಮೂಲಕ ಸಂಪೂರ್ಣ ಕನ್ನಡ ಸಾಹಿತ್ಯದ ಅವಲೋಕನದ ಬಗ್ಗೆ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕ್ಪಾಲ ಹೂವಣ್ಣ ಮಾತನಾಡಿ “ಕನ್ನಡವನ್ನು ಕೇವಲ ವಿಷಯವಷ್ಟೆ ಎಂದುಕೊಳ್ಳದೆ ಉಸಿರಿನಂತೆ ಬದುಕಿನಲ್ಲಿ ಬಳಸಿದಾಗ ಮಾತ್ರ ನಮ್ಮ ಕನ್ನಡ ಭಾಷೆ ಉಳಿದು ಬೆಳೆಯುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ರಾಜ್ಯೋತ್ಸವದ ಅಂಗವಾಗಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಜೊತೆಗೆ, 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ವೇದಿಕೆಯ ಮೇಲೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿಭಾಗದ ಉಪನ್ಯಾಸಕ ಡಾ. ಚಲುವರಾಜು, ಡಾ.ವಿದ್ಯಾ ಪಾಟನಕರ, ಡಾ.ರೂಪಾ ಇಂಗಳೆ, ವಿದ್ಯಾರ್ಥಿನಿಯರು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...