ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿರುವ 2024-25ನೇಯ ಸಾಲಿನ ರಾಜ್ಯ ಬಜೆಟ್ ಪ್ರಗತಿಪರವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮಹಿಳಾ ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಣೇಶ ಎಸ್.ಆರ್ ಹೇಳಿದರು.
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ 2024-2025ನೇ ಸಾಲಿನ ರಾಜ್ಯ ಬಜೆಟ್ ಕುರಿತ ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಆರ್.ವಿ. ಗಂಗಶೆಟ್ಟಿ ಮಾತನಾಡಿ, 2024-25ರ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ಉತ್ತರ ಕರ್ನಾಟಕ ಭಾಗದ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಆದ್ಯತೆಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅತಿಥಿಯಾಗಿದ್ದ ವಿವಿ ಆವರಣದ ಕೆನರಾ ಬ್ಯಾಂಕ್ ತೊರವಿ ಶಾಖೆಯ ಮ್ಯಾನೇಜರ್ ಶರದ ನಾಡಗೌಡ ಮಾತನಾಡಿ, ಬಜೆಟ್‌ನ ಪ್ರಾಮುಖ್ಯತೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಯಾದಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾ. ಡಾ. ಮೊಗಲಪ್ಪಾ ಎ.ಪಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ವಿವಿಧ ವಿಭಾಗದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸುನೀತಾ ಕಾಂಬಳೆ ಸ್ವಾಗತ ಗೀತೆಯನ್ನು ಹಾಡಿದರು. ಡಾ.ಕೀರ್ತಿ ಹೊನವಾಡ ಪರಿಚಯಿಸಿದರು. ಜ್ಯೋತಿ ಬಸೀನಕರ ಸ್ವಾಗತಿಸಿದರು, ಜ್ಯೋತಿಬಾಯಿ ನಾಯಕ ವಂದಿಸಿದರು. ಮಾಬುಬಿ ಮುಲ್ಲಾ ಕಾರ್ಯಕ್ರಮ ನಿರೂಪಿಸದರು.