ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸದಿದ್ದರೆ ಹೋರಾಟ ತೀವ್ರವಾಗುತ್ತದೆ: ಚಿಂತಕ ಸಿದ್ದನಗೌಡ ಪಾಟೀಲ

Date:

‘ವಿಜಯಪುರದಲ್ಲಿ ಉದ್ದೇಶಿತ ಪಿಪಿಪಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ವಿಜಯಪುರದಲ್ಲಿ 40 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಕಾರಣ ಹೋರಾಟವನ್ನು ಶೀಘ್ರದಲ್ಲೇ ಬೆಂಗಳೂರಿಗೆ ವಿಸ್ತರಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಆದರೆ, ವಿಜಯಪುರಕ್ಕೆ ಪಿಪಿಪಿ ಮಾದರಿ ಏಕೆ? ಮುಖ್ಯಮಂತ್ರಿಗಳು, ಸಚಿವರು ಜಿಲ್ಲೆಯ ಶಾಸಕರೊಬ್ಬರಿಗೆ ರಾಜಕೀಯ ಲಾಭಕ್ಕಾಗಿ ಮಾತು ಕೊಟ್ಟಿದ್ದಾರೆಂಬ ಆರೋಪ ಕೇಳಿಬರುತ್ತಿದೆ” ಎಂದು ಶಂಕೆ ವ್ಯಕ್ತಪಡಿಸಿದರು.

“ವಿಜಯಪುರದಲ್ಲಿ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆ ಹಿಂದೆ ಭೂ ಮಾಫಿಯಾ, ವೈದ್ಯಕೀಯ ಮಾಫಿಯಾ ಮಾಡುತ್ತಿವೆ” ಎಂದು ಆರೋಪಿಸಿದರು.

“ವಿಜಯಪುರ ಜಿಲ್ಲೆಯಲ್ಲಿ ನವಜಾತ ಶಿಶು, ತಾಯಿ ಮರಣ, ಅಪೌಷ್ಟಿಕತೆ, ಬಡತನ ಹೆಚ್ಚಿದೆ. ಶೈಕ್ಷಣಿಕವಾಗಿ ಜಿಲ್ಲೆಯು ಹಿಂದುಳಿದಿದೆ. ಕಾರಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಖಾಸಗಿ ಕಂಪನಿಗಳು ಎಂದಿಗೂ ಜನರಿಗೆ ಸಹಾಯ, ಸೇವೆ ಮಾಡುವುದಿಲ್ಲ. ಲಾಭಕ್ಕಾಗಿ ಬಂಡವಾಳ ಹೂಡಿಕೆ ಮಾಡುತ್ತವೆ. ಆರೋಗ್ಯ ಉದ್ಯಮವಾಗಬಾರದು, ಸೇವೆಯಾಗಿಯೇ ಇರಬೇಕು. ವೈದ್ಯಕೀಯ ಶಿಕ್ಷಣ ಇಂದು ದೊಡ್ಡ ಮಾಫಿಯಾ ಆಗಿದೆ. ವೈದ್ಯಕೀಯ ಶಿಕ್ಷಣ ಬಡವರಿಗೆ ನಿಲುಕದ ಸ್ಥಿತಿಯಲ್ಲಿದೆ. ಖಾಸಗಿ ಕಾಲೇಜುಗಳು ದುಬಾರಿ ಹಣಕ್ಕೆ ಸೀಟು ಮಾರಾಟ ಮಾಡುತ್ತಿವೆ. ಆರೋಗ್ಯ ಎಂಬುದು ಖರೀದಿ ಮತ್ತು ಮಾರಾಟದ ಸರಕಾಗಬಾರದು” ಎಂದರು.

ಬಸವ ಚಿಂತಕ ಜಿ ಬಿ ಪಾಟೀಲ ಮಾತನಾಡಿ, “ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ಹೆಚ್ಚು ಅನುದಾನದ ಅಗತ್ಯವಿಲ್ಲ. ಕೇವಲ ಕಾಲೇಜು ಕೊಠಡಿಗಳನ್ನು ನಿರ್ಮಿಸಿ, ಅಧ್ಯಾಪಕರನ್ನು ನೇಮಿಸಿದರೆ ಸಾಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನವೆಂಬರ್ 08ಕ್ಕೆ ಕನಕದಾಸರ ಜಯಂತಿ: ತಯಾರಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಗದುಗಿನ ಲಡಾಯಿ ಪ್ರಕಾಶನದ ಸಂಚಾಲಕ ಬಸವರಾಜ ಸೂಳಿಬಾವಿ ಮಾತನಾಡಿ, “ಜನಸಾಮಾನ್ಯರ ಹಿತ ಕಾಯುವ ಬದಲು ಖಾಸಗಿಯವರ ಹಿತ ಕಾಪಾಡಲು ಸಚಿವರು, ಶಾಸಕರು ನಿಂತಿರುವುದು ಸರಿಯಲ್ಲ. ಸಚಿವರು, ಶಾಸಕರು ಜಿಲ್ಲೆಯ ಜನತೆಯ ವಿರೋಧಿಗಳಾಗಬಾರದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಜಿಲ್ಲೆಯ ರಾಜಕಾರಣಿಗಳು ಒಟ್ಟಾಗಿ ಧ್ವನಿ ಎತ್ತಬೇಕಿದೆ” ಎಂದರು.

ಪ್ರಮುಖರಾದ ಡಾ. ಅರವಿಂದ ಮಾಲಗತ್ತಿ, ವಿದ್ಯಾವತಿ ಅಂಕಲಗಿ, ಭರತ್ ಎಚ್ ಟಿ, ಚನ್ನು ಕಟ್ಟಿಮನಿ, ಫಾದರ್ ಕೆವಿನ್, ಶ್ರೀನಾಥ ಪೂಜಾರಿ, ಅನಿಲ ಹೊಸಮನಿ, ಸುರೇಶ ಜಿ ಬಿ, ಲಕ್ಷ್ಮಣ ಹಂದ್ರಾಳ, ಜಗದೇವ ಸೂರ್ಯವಂಶಿ, ಸಿದ್ರಾಮ ಹಳ್ಳೂರ, ಸೋಮು ರಣದೇವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...