ವಿಜಯಪುರ | ಲೋಕಸಭಾ ಚುನಾವಣೆ – ಭಾವನೆ ಕೆರಳಿಸುವ v/s ಬದುಕು ರೂಪಿಸುವ ಸಂಘರ್ಷ: ಸಚಿವ ಎಚ್.ಕೆ ಪಾಟೀಲ್‌

Date:

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ಹೇಳಿದರು.

ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮೋದಿಯವರು ಹೇಳಿದಂತೆ ಯಾವುದೂ ಈಡೇರಿಸಲಿಲ್ಲ. ಆದರೆ, ನಾವು ನುಡಿದಂತೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಶೇ.90ರಷ್ಟು ಭಾಗದ ಹೆಣ್ಣುಮಕ್ಕಳಿಗೆ ಹಣ ನೇರವಾಗಿ ತಲುಪಿದೆ. ಮಧ್ಯವರ್ತಿಗಳಿಲ್ಲ, ಶೋಷಣೆ ಇಲ್ಲದೆ ಯೋಜನೆ ಮುಟ್ಟಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ವಚನ ಭ್ರಷ್ಟತೆ ಮೆರೆದಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯಕ್ಕೆ ಪರಿಹಾರ ನೀಡಲು, ಜಿಎಸ್‌ಟಿ ಪಾಲು ನೀಡುವಲ್ಲಿ ತಾರತಮ್ಯವನ್ನು ಮಾಡಲಾಗಿದೆ. ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆ. ನಾವು ಬಡವರ ಪರ ದುಡ್ಡು ಹಾಕಿದರೆ ದಿವಾಳಿಯಾಗುತ್ತದೆ ಎನ್ನುತ್ತಾರೆ. ಆದರೆ, ಅಚ್ಚುಕಟ್ಟಾಗಿ ಯೋಜನೆ ತಲುಪಿಸಿದ್ದು ನಮ್ಮ ಸಾಧನೆ ಎಂದು ಹೇಳಿದರು.

ರೈತರಿಗೆ ವಿಮೆ ಕೊಡುವುದರಲ್ಲೂ ಹಗರಣ ಮಾಡಲಾಗಿದೆ. ಎಕರೆಗೆ ಎಪ್ಪತ್ತು ರೂ. ಪರಿಹಾರವನ್ನು ರೈತರಿಗೆ ನೀಡಿ ಮೋದಿ ಸರ್ಕಾರ ನಾಚಿಕೆ ಮೆರೆದಿದೆ. ಮತದಾರರು ಪ್ರಜಾಪ್ರಭುತ್ವ ಹಕ್ಕನ್ನು ಉಳಿಸಲು ಪ್ರಜ್ಞಾವಂತಿಕೆ ಮೆರೆಯಬೇಕಿದೆ. ಸಂಸತ್ತನ್ನು ತಮ್ಮ ದುರ್ನಡತೆಗೆ ಇವರು ಬಳಸಿಕೊಂಡಿದ್ದಾರೆ. ಚುನಾವಣಾ ಬಾಂಡ್ ಮೂಲಕ ನಡೆಸಿದ ಅವ್ಯವಹಾರದ ಬಣ್ಣವನ್ನು ಸುಪ್ರೀಂ ಕೋರ್ಟ್ ಕಳಚಿದೆ ಎಂದರು.

ರೈತರ ಹೋರಾಟಕ್ಕೆ ಬೆಲೆ ಇಲ್ಲ. ಅವರ ಕಲ್ಯಾಣದ ವಿಚಾರವಿಲ್ಲ. ವ್ಯಾಪಾರಿಗಳ ಹದಿನಾಲ್ಕು ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡುವ ಇವರು, ರೈತರಿಗೆ ನೀಡುವ ಪರಿಹಾರದ ಲೆಕ್ಕ ಹಾಕುತ್ತಾರೆ. ಸದ್ಯ ಲೋಕಸಭೆಗೆ ವಿವೇಚನೆಯಿಂದ ಆಲಗೂರರಿಗೆ ಮತ ನೀಡಿದರೆ ವಿಜಯಪುರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ. ಗ್ಯಾರಂಟಿಗಳ ಮೂಲಕ ಬಡವರ ಮನೆಗೆ ಸೌಖ್ಯ ಬಂದಿದೆ. ಬೆಲೆ ಏರಿಕೆ ದಿನಗಳಲ್ಲಿ ಇದು ಸಂಜೀವಿನಿಯಾಗಿದೆ ಎಂದರು.

ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲಿ ಮಾತು ತಪ್ಪಿ ವೈಫಲ್ಯ ಕಂಡಿದೆ. ಸದ್ಯದ ಸಂಸತ್ ಸದಸ್ಯರು ಯಾವೊಂದು ಕೆಲಸ ಮಾಡಿಲ್ಲ. ಇದೆಲ್ಲ ವ್ಯತ್ಯಾಸ ಗಮನಿಸಿ ತಮಗೆ ಮತ ನೀಡಿದರೆ ನಿಮ್ಮ ವಿಶ್ವಾಸ ಉಳಿಸಿಕೊಳ್ಳುವೆ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆನಂದ ಕುಮಾರ ದೇಸಾಯಿ, ಮುಖಂಡರಾದ ಬಸವರಾಜ ದೇಸಾಯಿ, ಎಚ್.ಬಿ. ಹರಣಹಟ್ಟಿ, ಅದೃಶ್ಯಪ್ಪ ದೇಸಾಯಿ, ಸಂಗಮೇಶ ಬಬಲೇಶ್ವರ, ಡಾ.ಮಹಾಂತೇಶ ಬಿರಾದಾರ, ಲಕ್ಷ್ಮಣ ಚಿಕ್ಕದಾನಿ, ತಿಪ್ಪಣ್ಣ ತುಂಗಳ, ಶಶಿಧರ ಬೀದರ, ಎಸ್.ಟಿ.ಪಾಟೀಲ, ರಮೇಶ ದೇಸಾಯಿ, ಶಂಕರಗೌಡ ಪಾಟೀಲ ಅನೇಕರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...