ವಿಜಯಪುರ | ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ತರಬೇತಿ ಅಗತ್ಯ: ಫಾ.ಸಂತೋಷ್

Date:

Advertisements

ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಯಾಗಲು ತರಬೇತಿಯ ಅವಶ್ಯಕತೆ ಇದೆ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಹೇಳಿದರು.‌

ಸಿಂದಗಿ ತಾಲೂಕಿನಲ್ಲಿ ಬಿವಿಟಿ ಸಂಸ್ಥೆ ಸೆಲ್ಲೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಹಾಗೂ ಸಂಗಮ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ಸ್ವ ಉದ್ಯೋಗ ತರಬೇತಿ ಕುರಿತ 1 ದಿನದ ಕಾರ್ಯಗಾರದಲ್ಲಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶದಲ್ಲಿ ಸೌರ ತಂತ್ರಜ್ಞಾನದ ಅನುಷ್ಠಾನ ಮತ್ತು ಆವಿಷ್ಕಾರದ ಕುರಿತು ಸ್ವಉದ್ಯೋಗ ಕೈಗೊಳ್ಳಲು ಮಾಹಿತಿ ಹಾಗೂ ತರಬೇತಿ ಅತ್ಯಗತ್ಯ. ಈ ಕುರಿತಾಗಿ ಸೆಲ್ಲೋ ಮತ್ತು ಸಂಗಮ ಸಂಸ್ಥೆ ಈಗಾಗಲೇ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದರು.

ತರಬೇತಿ ವ್ಯವಸ್ಥಾಪಕ ಶಿವುಕುಮಾರ, ಗ್ರಾಮೀಣ ಪ್ರದೇಶದಲ್ಲಿ ಸೌರ ತಂತ್ರಜ್ಞಾನ ಅನುಷ್ಠಾನ ಮತ್ತು ಆವಿಷ್ಕಾರದ ಕುರಿತು ಜೀವನೋಪಾಯಕ್ಕೆ ಅನುಕೂಲವಾಗುವ ಉಪಕರಣಗಳ ಕುರಿತು ಮಾರ್ಗದರ್ಶನ ನೀಡಿದರು.

Advertisements

ಕೆನರಾ ಬ್ಯಾಂಕ್‌ನ ಆರ್ಥಿಕ ಸಾಕ್ಷಾರತಾ ಸಂಯೋಜಕ ಗಿರೀಶ್ ದಂಗಿ ಅವರು, ಬ್ಯಾಂಕಿನ ಸಾಲ ಸೌಲಭ್ಯಗಳು ಹಾಗೂ ಇನ್ಸೂರೆನ್ಸ್‌ ಯೋಜನೆ ಹಾಗೂ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿ ನೀಡದರು.

ಇದನ್ನೂ ಓದಿ: ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಕಾರ್ಯಾಗಾರದಲ್ಲಿ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ತೇಜಸ್ವಿನಿ ಹಳ್ಳದ ಕೇರಿ, ವಿಜಯ ಬಂಟನೂರ, ಬಸವರಾಜ ಬಿಸನಾಳ, ಸಂಗೀತಾ ಜಾಬೇನವರ ಮತ್ತಿತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X