ವಿಜಯಪುರ | ತುಬಚಿ-ಬಬಲೇಶ್ವರ ಏತನೀರಾವರಿ; ಭೂಮಿ ಕಳೆದುಕೊಂಡವರಿಗೆ ಪರಿಹಾರ ಬಿಡುಗಡೆಗೆ ಆಗ್ರಹ

Date:

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಿ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮನವಿ ಸಲ್ಲಿಸಿತು.

- Advertisement -

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ವಿತರಣಾ ತೊಟ್ಟಿ-1ಎರ ಕಾಜಿಬೀಳಗಿ ಪಶ್ಚಿಮ ಕಾಲುವೆಯ ವಿತರಣಾ ಕಾಲುವೆ-10 ರ ಮೇನ್ ಮತ್ತು ವಿತರಣಾ ಕಾಲುವೆ 11 ರ ನಿರ್ಮಾಣಕ್ಕಾಗಿ ಅನೇಕ ರೈತರ ಜಮೀನುಗಳನ್ನು 2020 ರಲ್ಲಿ ಕೇವಲ ಭೂಸ್ವಾಧಿನ ನೋಟಿಸ್ ಕೊಟ್ಟು ಕೆಲಸ ಮುಗಿಸಿ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ ಎಂಉ ರೂತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಮಗಾರಿ ಪ್ರಾರಂಭಕ್ಕೂ ಮೊದಲೇ ರೈತರಿಗೆ ಹಣ ಬಿಡುಗಡೆ ಮಾಡಿ ನಂತರ ಕಾಮಗಾರಿ ಪ್ರಾರಂಭಿಸಬೇಕು ಎಂಬ ನಿಯಮವಿದ್ದರೂ, ಅದನ್ನು ಗಾಳಿಗೆ ತೂರಿ ಗುತ್ತಿಗೆದಾರರು ತಮ್ಮ ಕೆಲಸ ಬೇಗ ಮುಗಿಸಿ ಬಿಲ್ ಪಡೆದುಕೊಳ್ಳುವು ತರಾತುರಿಯಲ್ಲಿ ರೈತರಿಗೆ ಅನ್ಯಾಯವೆಸಗಿದ್ದಾರೆ. ಭೂಮಿ ಕಳೆದುಕೊಂಡ ರೈತರು ಅನೇಕ ಬಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು ಇಲ್ಲಿಯವರಿಗೂ ಯಾವುದೇ ಪ್ರಯೋಜನ ಆಗಿರುವುದಿಲ್ಲ, ಆದ್ದರಿಂದ ಕೂಡಲೇ ರೈತರಿಗೆ ಭೂ ಪರಿಹಾರ ಒದಗಿಸಿಕೊಡಬೇಕು, ಇಲ್ಲದಿದ್ದಲಿ ಎಲ್ಲಾ ರೈತರು ಸೇರಿಕೊಂಡು ಕಾಲುವೆಗಳನ್ನು ಮುಚ್ಚಿ ಹೋರಾಟ ಮಾಡಬೇಕಾಗುವುದು ಅನಿವಾರ್ಯವಾಗಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ,  ಇಲ್ಲಿಯವರೆಗೆ ರೈತರಿಗೆ ಭೂ ಸ್ವಾಧಿನದ ಹಣ ಬರದಿರುವುದನ್ನು ಸರ್ಕಾರಕ್ಕೆ ತಿಳಿಸಿ ಹಣ ಮಂಜೂರಾಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ, ಮಹಿಳಾ ಅಧ್ಯಕ್ಷರಾದ ರೇಖಾ ಪಾಟೀಲ, ಈರಪ್ಪ ಕುಳೆಕುಮಟಗಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಬನಸೋಡೆ, ಶ್ರೀಶೈಲ ವಾಲಿಕಾರ, ಶಿವಾನಂದಯ್ಯ ಹಿರೇಮಠ, ಸುಭಾಸ ಸಜ್ಜನ, ನಜೀರ ನಂದರಗಿ, ಶಾನೂರ ನಂದರಗಿ, ಖಾದರಸಾಬ ವಾಲಿಕಾರ,  ರಾಮನಗೌಡ ಪಾಟೀಲ, ಮಹಾದೇವ ತೇಲಿ, ಅರುಣಗೌಡ ತೇರದಾಳ, ಸಂಗಪ್ಪ ಟಕ್ಕೆ, ಸಂಪತ್ತ ಜಮಾದಾರ, ಸಂಗಮೇಶ ಹುಣಸಗಿ, ಹಣಮಂತ ಬ್ಯಾಡಗಿ, ಎಚ್.ಎನ್.ಪಾಟೀಲ, ಮಹಾದೇವ ಕದಂ, ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...