ವಿಜಯಪುರ | ಎರಡು ಪ್ರತ್ಯೇಕ ರಥೋತ್ಸವಗಳ ವೇಳೆ ಇಬ್ಬರು ಸಾವು

Date:

  • ವಿಜಯಪುರ ಜಿಲ್ಲೆಯಲ್ಲಿ ರಥೋತ್ಸವಕ್ಕೂ ಮುನ್ನ ದುರ್ಘಟನೆ
  • 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುತ್ತಿದ್ದ ಖಾಜಾಪಾಟೇಲ್ ಸಾವು

ವಿಜಯಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಥೋತ್ಸವದಲ್ಲಿ ಎರಡು ದುರ್ಘಟನೆಗಳು ನಡೆದಿವೆ. ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ವೇಳೆ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದರೆ, ಬಸರಕೋಡ ಗ್ರಾಮದಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಸಾಹೇಬಪಟೇಲ್ ಖಾಜಾಪಟೇಲ್ ಕಾಚಾಪುರ (55) ಎಂಬವರು ರಥದ ತುತ್ತತುದಿಯಲ್ಲಿ ಕಲಶ ಕಟ್ಟುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ರಥದಿಂದ ಬಿದ್ದಿದ್ದಾರೆ. ಕೂಡಲೇ ಗ್ರಾಮಸ್ಥರು ಗಾಯಾಳು ಖಾಜಾಪಟೇಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ, ಅವರು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅವರು ತಮ್ಮ 18ನೇ ವಯಸ್ಸಿನಿಂದಲೂ ರಥದ ಕಲಶ ಕಟ್ಟುವ ಕಾರ್ಯ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. ದುರ್ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಥೋತ್ಸವವನ್ನು ರದ್ದುಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಬಸರಕೋಡ ಗ್ರಾಮದಲ್ಲಿ ರಥೋತ್ಸವ ವೇಳೆ ದುರ್ಘಟನೆ

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬಸರಕೋಡ ಗ್ರಾಮದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ಪ್ರಯುಕ್ತ ರಥೋತ್ಸವ ನಡೆಸಲಾಗುತ್ತಿತ್ತು. ರಥ ಎಳೆಯುತ್ತಿದ್ದ ವೇಳೆ ನಾಗರಾಜ್ ಯಲ್ಲಪ್ಪ ವಣಕ್ಯಾಳ ಎಂಬ ಯುವಕ ರಥದ ಚಕ್ರದಡಿ ಬಿದ್ದಿದ್ದಾನೆ. ಬಳಿಕ ಆತನ ಎರಡೂ ಕಾಲುಗಳ ಮೇಲೆ ಕಲ್ಲಿನ ಚಕ್ರ ಹರಿದು ಹೋಗಿದೆ. ಕೂಡಲೇ ಗಾಯಾಳು ನಾಗರಾಜ್ ಯಲ್ಲಪ್ಪನನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...