ವಿಜಯಪುರ | ಎಸ್‌ಐಆರ್ ಅಸಾಂವಿಧಾನಿಕ; ರಾಜ್ಯದಲ್ಲಿ ಜಾರಿ ಸಲ್ಲ: ಯೂಸುಫ್ ಕನ್ನಿ

Date:

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಅಗತ್ಯ ಪ್ರಕ್ರಿಯೆಯಾಗಿದ್ದು, ಅದನ್ನು ನಿಯಮಿತವಾಗಿ ನಡೆಸಬೇಕು. ಆದರೆ, ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಅಸಾಂವಿಧಾನಿಕವಾಗಿದ್ದು ರಾಜ್ಯದಲ್ಲಿ ಜಾರಿ ಸಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಯೂಸುಫ್ ಕನ್ನಿ ಅಭಿಪ್ರಾಯಪಟ್ಟರು.

ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ ಬರಲಿ” ಎಂದು ಆಗ್ರಹಿಸಿದರು.

- Advertisement -

“ಚುನಾವಣಾ ಆಯೋಗ ಎಸ್‌ಐಆರ್ ಘೋಷಣೆ ಮಾಡುವಾಗ ನಕಲಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ಎಂದು ಹೇಳಿತ್ತು. ಆದರೆ, ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಲಕ್ಷಾಂತರ ಜನರ ಸಾಂವಿಧಾನಿಕ ಹಕ್ಕು ಕಿತ್ತುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಾಗಿ, ಇಂತಹ ಅಸಾಂವಿಧಾನಿಕ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ನಡೆಸುವುದು ಬೇಡ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನಾವು ಈಗಾಗಲೇ ಚುನಾವಣಾ ಆಯೋಗದ ಎದುರು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಅವುಗಳಿಗೆ ಆಯೋಗ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ” ಎಂದು ತಿಳಿಸಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಆರಿಫುಲ್ಲಾ ಮಾತನಾಡಿ, “ಎಸ್‌ಐಆರ್‌ ಮತದಾರರ ಪಟ್ಟಿಯ ಸಾಮಾನ್ಯ ಪ್ರಕ್ರಿಯೆ ಅಲ್ಲ, ವಿಶೇಷ ಪರಿಷ್ಕರಣೆಯಾಗಿದೆ. ದೇಶದ ಜನರ ನಾಗರಿಕತ್ವ ನಿರ್ಧರಿಸಲು ಮುಂದಾಗಿರುವ ಈ ದೊಡ್ಡ ಪ್ರಕ್ರಿಯೆಗೆ ಸಂಸತ್ತಿನ ಅನುಮೋದನೆ ಪಡೆದಿಲ್ಲ, ಸರ್ಕಾರದಿಂದ ಯಾವುದೇ ಅಧಿಕೃತ ರಾಜಪತ್ರ ಪ್ರಕಟಿಸಿಲ್ಲ” ಎಂದರು.

“ಎಸ್ಐಆರ್ ನಮೂನೆಯಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯತ್ಯಾಸವಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ಮೊದಲು ಸರ್ಕಾರ ಬಂದು ಮತದಾರರ ಪಟ್ಟಿ ತಯಾರಿಸುತಿತ್ತು, ಈಗ ನಾವೇ ಮಾಡಬೇಕಂತೆ. ಚುನಾವಣಾ ಆಯೋಗ ಏನೇ ತಪ್ಪು ಮಾಡಿದರೂ ಪ್ರಶ್ನಿಸುವ ಅಧಿಕಾರ ಕಿತ್ತುಕೊಳ್ಳಲಾಗಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಮಾರ್ಪಡಿಸಿರುವುದು ಇವೆಲ್ಲ ಅವ್ಯವಸ್ಥೆಗಳ ಮೂಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನೇ ಬದಲಿಸಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಐಆರ್‌ ಮೂಲಕ ವಲಸೆ ಕಾರ್ಮಿಕರನ್ನು ನುಸುಳುಕೋರರು ಎಂದು ಹಣೆಪಟ್ಟಿ ಕಟ್ಟಲಾಗ್ತಿದೆ. ರಾಜ್ಯದಿಂದ ರಾಜ್ಯಕ್ಕೆ ವಲಸೆ ಬಂದವರು ನುಸುಳುಕೋರರಲ್ಲ, ಅವರೂ ನಮ್ಮ ದೇಶದವರು. ಬಡ ಕೂಲಿ ಕಾರ್ಮಿಕರು, ದಲಿತರು, ಆದಿವಾಸಿಗಳು ಎಲ್ಲಿಂದ ದಾಖಲೆಗಳನ್ನು ತರಬೇಕು” ಎಂದು ಪ್ರಶ್ನಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡ ರಫೀಕ್ ಅಹ್ಮದ್ ಮಾತನಾಡಿ, “ಎಸ್‌ಐಆರ್ ಮೂಲಕ ದೇಶದ ಪ್ರಜೆಗಳನ್ನು ಹೊರಗಿಟ್ಟು ಚುನಾವಣೆ ನಡೆಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಎಸ್‌ಐಆರ್‌ ವೇಳೆ ಮತದಾರರ ಪಟ್ಟಿಯಿಂದ ಹೊರಬಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಲಾಗಿತ್ತು ಆದರೆ, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವ ಮೊದಲೇ ಚುನಾವಣೆ ನಡೆದಿರುವ ಉದಾಹರಣೆಗಳನ್ನು ನಾವು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೋಡಿದ್ದೇವೆ” ಎಂದರು.

ಪತ್ರಿಕಾ ಗೋಷ್ಠಿಯಲ್ಲಿಬಿ ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅಬ್ದುಲ್ ಖದಿರ್, ಇಶನ್ ಉಲ್ಲಾ ಮುನ್ಸಿ,ಸುರೇಶ ಬಿಜಾಪುರ್,ಶ್ರೀನಾಥ ಪೂಜಾರಿ, ಸರೊವರ ಬೆಂಕಿಕೆರಿ, ಫಯಾಜ್ ಕಲಾದಗಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...