ವಿಜಯಪುರ | ಬಡ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡುತ್ತಿರುವ ವಿವಿ: ಡಿವಿಪಿ ಪ್ರತಿಭಟನೆ

Date:

Advertisements

“ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಮತ್ತು ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಮಹಿಳಾ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಆದರೆ ಇಲ್ಲಿ ವಿದ್ಯಾರ್ಥಿನಿಯರಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ವಸತಿ ಪ್ರವೇಶ ನೀಡಿ, ಇದೀಗ ಏಕಾಏಕಿ 3 ವರ್ಷದ ಶುಲ್ಕ ಕಟ್ಟಿಬೇಕು ಎನ್ನುತ್ತಿದ್ದಾರೆ. ಬಡ ದಲಿತ ವಿದ್ಯಾರ್ಥಿಗಳಿಂದ ದುಡ್ಡು ವಸೂಲಿಗೆ ಇಳಿದಿರುವುದೂ ದುರಂತ. ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯಪುರ ಪಟ್ಟಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಂದ  ಮೂರು ವರ್ಷದ ಹೆಚ್ಚಿನ ಶುಲ್ಕವನ್ನು ಕಟ್ಟಬೇಕು ಎಂಬುಬುದನ್ನು ಖಂಡಿಸಿ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಎದುರು ಪ್ರತಿಭಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಶುಲ್ಕ ಕಟ್ಟದ್ದಿದರೆ ಶೈಕ್ಷಣಿಕ “ಕೆರೆನ್ಸ್” ನೀಡುವುದಿಲ್ಲ ಎನ್ನುವ ಉದ್ಧಟತನದ ಮಾತುಗಳನ್ನಡುತ್ತಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ನಿರ್ಮಾಣವಾಗಿದೆ. ಶುಲ್ಕ ಕಟ್ಟುವ ನೆಪದಲ್ಲಿ ನಿಲಯ ಪಾಲಕರುಗಳು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುವುದು ನೋಡಿದರೆ ವಿಶ್ವವಿದ್ಯಾಲಯ ಅಸಮಾನತೆ ನಿವಾರಣೆ ಮಾಡುವ ಉದ್ದೇಶ ಕೈಬಿಟ್ಟು ದುಡ್ಡು ಮಾಡುವ ಕೇಂದ್ರವಾಗಿ ಮಾರ್ಪಟ್ಟಂತೆ ಕಾಣುತ್ತದೆ” ಎಂದು ಸಂಶಯ ವ್ಯಕ್ತಪಡಿಸಿದರು.

Advertisements

ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ ಮಾತನಾಡಿ, “ವಿಶ್ವ ವಿದ್ಯಾಲಯದಲ್ಲಿನ ಭ್ರಷ್ಟ ವ್ಯವಸ್ಥೆಯ ನೇರ ಕಾರಣವಾಗಿದೆ. ವಿಶ್ವ ವಿದ್ಯಾಲಯ ತನ್ನ ಗುರಿ ಉದ್ದೇಶ ಮರೆತಿದ್ದೆ. ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯಗಳ ಕೊರತೆ, ವಸತಿ ನಿಲಯಗಳಲ್ಲಿ ಕಳಪೆ ಆದ

ಆಹಾರ ವಿತರಣೆ, ಮೌಲ್ಯಮಾಪನ ವಿಭಾಗದಲ್ಲಿ ನಡೆಯುತ್ತಿರುವ ಅಕ್ರಮಗಳು, ಖರೀದಿ ಹೆಸರಿನಲ್ಲಿ ಹಣಕಾಸಿನ ದುರುಪಯೋಗ ಮಾಡಿಕೊಲ್ಲುವುದು ಕಂಡು ಬಂದಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಪದವಿ ಕೊರ್ಸಗಳನ್ನು ಆರಂಭವಾದರೂ ಸೂಕ್ತ ಭೋಧಕ ಸಿಬ್ಬಂದಿ ನೇಮಕ ಮಾಡಿಕೊಂಡಿಲ್ಲ. ಹೀಗಾದರೆ ಇಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೇಗೆ ಗುಣಮಟ್ಟದ ಶಿಕ್ಷಣ ಸಿಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಿದ್ಯಾಲಯ ಶೈಕ್ಷಣಿಕ ಅಭಿವೃದ್ಧಿ ಕಡೆ ಗಮನ ಹರಿಸಬೇಕಾಗಿದೆ. ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿ ವಿದ್ಯಾರ್ಥಿನಿ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು

“ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಸತಿ ಶುಲ್ಕವನ್ನು ಕೂಡಲೆ ರದ್ದುಗೊಳಿಸಬೇಕು. ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ, ಉದ್ದಟತನದ ಮಾತನಾಡುವ ನಿಲಂಯ ಪಾಲಕರನ್ನು ಕೊಡಲೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

“ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ  ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X