ವಿಜಯಪುರ | ಶರಣರ ಎಲ್ಲ ಕುರುಹುಗಳನ್ನು ಉಳಿಸಿ ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ

Date:

Advertisements

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಡಿ ಇದ್ದ ಬಸವನ ಬಾಗೇವಾಡಿಯನ್ನು ಬೇರ್ಪಡಿಸಿ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಅನುಷ್ಟಾನಕ್ಕೆ ತಂದಿದೆ. ಇದರ ಅಡಿಯಲ್ಲಿ ಉಳಿದ ಶರಣರ ಕ್ಷೇತ್ರಗಳನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸೇರ್ಪಡೆ ಮಾಡಿ ಶರಣರ ಜೀವನ ಚರಿತ್ರೆ ಹಾಗೂ ಶರಣರ ಕುರುಹುಗಳನ್ನು ಉಳಿಸಲು ಸ್ಮಾರಕಗಳನ್ನು ನಿರ್ಮಿಸುವುದರೊಂದಿಗೆ ಸಂಪೂರ್ಣ ಅಭಿವೃದ್ಧಿ ಪಡಿಸಬೇಕೆಂದು ಇಂಗಳೇಶ್ವರ ಗ್ರಾಮದ ವಿಶ್ವಗುರು ಬಸವ ಮಾತಾ ಮಾದಲಾಂಬಿಕೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರೈತ ಮುಖಂಡ ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಿಜಯಪುರ ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಸವನ ಬಾಗೇವಾಡಿ ನೂತನ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಬಸವ ಜನ್ಮಸ್ಥಳ ಇಂಗಳೇಶ್ವರ, ಹೋರಿಮಟ್ಟಿ ಗುಡ್ಡ, ಹಡಪದ ಅಪ್ಪಣ್ಣ ಜನಿಸಿದ ಮಸಬಿನಾಳ, ಲಿಂಗಮ್ಮಳ ಜನ್ಮಸ್ಥಳ ದೇಗಿನಾಳ, ಮಡಿವಾಳ ಮಾಚಿದೇವರ ಜನ್ಮಸ್ಥಳ ದೇವರ ಹಿಪ್ಪರಗಿ, ನುಲಿಯ ಚಂದಯ್ಯನವರ ಜನ್ಮಸ್ಥಳ ಶಿವಣಗಿ, ನೀಲಮ್ಮಳ ಐಕ್ಯಸ್ಥಳ ತಂಗಡಗಿ ಇವುಗಳನ್ನು ಮಾತ್ರ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇರ್ಪಡೆಗೊಳಿಸಲಾಗಿದೆ. ಆದರೆ ಇನ್ನೂ ಜಿಲ್ಲೆಯಲ್ಲಿ ಹಲವಾರು ಶರಣರು ಜನಿಸಿದ ಕ್ಷೇತ್ರಗಳಿದ್ದು,ಇವುಗಳನ್ನು ಸರ್ಕಾರದ ಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರಿದರು.

ಮುದ್ದೇಬಿಹಾಳ ತಾಲೂಕಿನ ಬಾವೂರಬೊಮ್ಮಯ್ಯನ ಜನ್ಮಸ್ಥಳ, ಸಿಂದಗಿ ತಾಲೂಕಿನ ಚಿಮ್ಮಲಗಿ ಚಂದಿಮರಸರು, ನಾಗರಹಳ್ಳಿಯ ಗೊಲ್ಲಾಳೇಶ್ವರ ದೇವಸ್ಥಾನ,ಲಕ್ಕಮ್ಮಳಬೈರವಾಡಗಿ, ಅಗ್ರಹಾರಗಳಾದ ಮುತ್ತಗಿ, ಮನಗೂಳಿ ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ ಇನ್ನುಳಿದ ಶರಣರ ಕ್ಷೇತ್ರಗಳನ್ನು ಗುರುತಿಸಿ ಅವುಗಳನ್ನು ಕೂಡ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

Advertisements

ಇದನ್ನು ಓದಿದ್ದೀರಾ? ಬಳ್ಳಾರಿ | ಅಂಬೇಡ್ಕರ್‌ಗೆ ಅವಮಾನ: ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಅಂತಾರಾಷ್ಟ್ರೀಯ ವಚನ ಅಧ್ಯಯನ ಕೇಂದ್ರ ಸ್ಥಾಪಿಸುವುದು, ಪ್ರಾಥಮಿಕ ಆರೊಗ್ಯ ಕೇಂದ್ರ ಮಂಜೂರು ಮಾಡಿಸುವುದು, ಬಸ್ ನಿಲ್ದಾಣ ಮಂಜೂರು ಮಾಡಿಸುವುದು, ಕ್ರೀಡಾಂಗಣ ನಿರ್ಮಿಸುವುದು, ಬಸವಣ್ಣನವರು ಈಜಾಡಿದ ಬಸವನ ಬಾವಿಯನ್ನು ಅಭಿವೃದ್ಧಿಪಡಿಸುವುದು, ಗ್ರಾಮದಲ್ಲಿಯ ಚಾಲುಕ್ಯರ ಕಾಲದ ಶ್ರೀಮನ್ ನಾರಾಯಣ ದೇವಸ್ಥಾನ ಜೀರ್ಣೋದ್ದಾರ ಮಾಡುವುದು, ರೇವಣಸಿದ್ದೇಶ್ವರ ಬೆಟ್ಟದ ಮೇಲೆ ಎಲ್ಲ ಶರಣರ ಮೂರ್ತಿಗಳನ್ನು ಸ್ಥಾಪಿಸುವುದು ಹಾಗೂ ಸುಂದರ ಉದ್ಯಾನವನ ನಿರ್ಮಾಣ ಮಾಡುವುದು ಸೇರಿದಂತೆ ಇಂಗಳೇಶ್ವರ ಗ್ರಾಮವನ್ನು ಸಂಪೂರ್ಣ ಅಭಿವೃದ್ಧಿಗೊಳಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸಬೇಕೆಂದು ಅರವಿಂದ ಕುಲಕರ್ಣಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದತ್ತಾತ್ರೆಯ ಕುಲಕರ್ಣಿ, ಭೀಮರಾಯ ತಾಳಿಕೋಟಿ, ಸಾಯಿನಾಥ ಪಾಟೀಲ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X