ವಿಜಯಪುರ | ಯುಯುಸಿಎಂಎಸ್‌ ಪೋರ್ಟಲ್‌ ಸಮಸ್ಯೆ; ₹1,500 ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಖಂಡನೆ

Date:

ಯುಯುಸಿಎಂಎಸ್‌ ಪೋರ್ಟಲ್‌ನಿಂದ ಉಂಟಾದ ಸಮಸ್ಯೆಯಿಂದ, ವಿದ್ಯಾರ್ಥಿಗಳಿಗೆ ₹1,500 ಹೆಚ್ಚುವರಿ ಶುಲ್ಕ ಭರಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಒಳಪಟ್ಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎ ಐ ಹಂಜಗಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, “ನವಭಾಗ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ 5ನೇ ಸೆಮಿಸ್ಟರ್‌ನಲ್ಲಿ ಕಲಿಯುತ್ತಿರುವ ಸುಮಾರು 200ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಳ್ಳುವಾಗ ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಓಪನ್‌ ಎಲೆಕ್ಟೀವ್(ಒಇ) ವಿಷಯಗಳ ಆಯ್ಕೆಯಲ್ಲಿ ಒಂದೇ ವಿಷಯದ ಆಯ್ಕೆ ತೋರಿಸಿದೆ. ಇದರಿಂದ ವಿದ್ಯಾರ್ಥಿಗಳು ಒಂದೇ ವಿಷಯವನ್ನು ಆಯ್ಕೆ ಮಾಡಿದ್ದಾರೆ. ಈಗ ಎರಡು ವಿಷಯ ಆಯ್ಕೆ ಮಾಡದ ವಿದ್ಯಾರ್ಥಿಗಳು ಮೂರು ದಿನದಲ್ಲಿ ₹1,500 ದಂಡ ಪಾವತಿಸಬೇಕೆಂದಿರುವುದು ಅವೈಜ್ನಾನಿಕ”  ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

“ಬಹುತೇಕ ವಿದ್ಯಾರ್ಥಿಗಳು ಪ್ರತಿದಿನ ಕೆಲಸ ಮಾಡಿ ಕಾಲೇಜು ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಅನಾವಶ್ಯಕವಾಗಿ ದಂಡ ವಿಧಿಸುತ್ತಿರುವುದನ್ನು ಕೈ ಬಿಟ್ಟು, ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಉಂಟಾದ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅರ್ಜಿ ತುಂಬಲು ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲೋಕಸಭೆ ಚುನಾವಣೆ: ಕರಪತ್ರ, ಪೋಸ್ಟರ್ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಜಿಲ್ಲಾಧಿಕಾರಿ

ಮನವಿಯನ್ನು ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಮಾತನಾಡಿ, “ಕಾಲೇಜಿನ ಪ್ರಾಂಶುಪಾಲರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಸಿದ್ದು ಕನ್ನೂರ, ಸಿದ್ದು ನಾಯ್ಕೋಡಿ, ಸತೀಶ ಆಸಂಗಿ, ಶ್ರೀಶೈಲ ಬಡಿಗೇರ, ಶಿವು ಉಪ್ಪಾರ, ಶಿವಕುಮಾರ್ ಬೇನೂರ ಸೇರಿದಂತೆ ಇತರ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....