ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಪೀಠದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಇದೇ ಸಂದರ್ಭದಲ್ಲಿ ಕುಲಪತಿಗಳು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲ ಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಕಾರ್ಯಕ್ರಮದ ಸಂಯೋಜಕ ಸಂದೀಪ್, ಡಾ.ಹನುಮಂತಯ್ಯ ಪೂಜಾರ, ಡಾ.ನಟರಾಜ ದುರ್ಗಣ್ಣನವರ, ಡಾ.ದೀಪಕ್ ಶಿಂಧೆ, ಡಾ.ಪ್ರಕಾಶ ಸಣ್ಣಕ್ಕನವರ, ಡಾ.ರಮೇಶ ಸೋನಕಾಂಬಳೆ, ಡಾ.ಗುಲಾಬ್ ರಾಠೋಡ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
