ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಾಧಾರಣ ಸಾಧನೆ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಸಾಧನ-ಸಲಕರಣೆ, ಪ್ರತಿಭೆ, ಟಾಕಿಂಗ್ ಲ್ಯಾಪ್‌ಟಾಪ್, ಬೈಲ್ ಕಿಟ್, ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆ ಯಂತ್ರ, ಮರಣ ಪರಿಹಾರ ನಿಧಿ ಹಾಗೂ ವೀಲ್‌ಚೇರ್ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು sevaone.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದರೂ ಸೌಲಭ್ಯ ದೊರೆಯದವರು ಸಹ ಈ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅಗತ್ಯ ದಾಖಲೆಗಳನ್ನು ಅರ್ಜಿಗೆ ಅಡಕಗೊಳಿಸಿ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಯ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕಿ ಪ್ರತಿಭಾ 9606151149, ವಿಜಯಪುರ ತಾಲ್ಲೂಕು ಪಂಚಾಯಿತಿಯ ರವಿ ರಾಠೋಡ 9035553337, ಇಂಡಿಯ ಪರಶುರಾಮ ಭೋಸಲೆ 9972441464, ಸಿಂದಗಿ ತಾಲ್ಲೂಕು ಪಂಚಾಯಿತಿಯ ಮುತ್ತುರಾಜ ಸಾತಿಹಾಳ 9980019635, ಮುದ್ದೇಬಿಹಾಳ ತಾಲ್ಲೂಕು ಪಂಚಾಯಿತಿಯ ಎಸ್.ಕೆ. ಘಾಟಿ 9740682979 ಹಾಗೂ ಬಸವನಬಾಗೇವಾಡಿ ತಾಲ್ಲೂಕು ಪಂಚಾಯಿತಿಯ ಶಿವಲೀಲಾ ಬಿರಾದಾರ 8722135660 ಅವರನ್ನು ಸಂಪರ್ಕಿಸಬಹುದು.
This video cannot be played in your browser. Open the video directly
ಈ ಕುರಿತು ವಿಜಯಪುರ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.





