ವಿಜಯಪುರ | ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ: ಆಲಗೂರ್

Date:

Advertisements

ಕಲಾ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್ ಎಸ್  ಕಾಲೇಜಿನ ವಿದ್ಯಾರ್ಥಿ ವೇದಾಂತ್ ‌ಕಾಂಗ್ರೆಸ್ ಗ್ಯಾರಂಟಿಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಹೇಳಿದ್ದಾರೆ.

ಸಾಧನೆ ಮಾಡಿರುವ ವಿದ್ಯಾರ್ಥಿಯನ್ನು ಸತ್ಕರಿಸಿ, ಆತನ ಭವಿಷ್ಯಕ್ಕೆ ಶುಭ ಹರಸಿ ಮಾತನಾಡಿ, “ಬಡ ಕುಟುಂಬದ ಈ ಪ್ರತಿಭಾವಂತನ ತಂದೆ ತೀರಿಕೊಂಡಿದ್ದಾರೆ. ತಾಯಿ ಮತ್ತು ಅಕ್ಕ ಇದ್ದಾರೆ. ಇವರ ಕುಟುಂಬ ನಿರ್ವಹಣೆಗೆ ಬಹಳ ಕಷ್ಟವಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯರ ಸರ್ಕಾರ ನೀಡಿದ ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ ಯೋಜನೆಗಳೇ ಇವರಿಗೆ ಆಧಾರವಾಗಿದ್ದವೆಂದು ಸ್ವತಃ ವೇದಾಂತ್ ಉಪಕಾರ ಸ್ಮರಣೆಯಿಂದ ಹೇಳಿದ್ದಾನೆ. ಇದು ಜನಾನುರಾಗಿ, ಜನಪರ ಸರ್ಕಾರದ ಸಾರ್ಥಕ್ಯವಾಗಿದೆ. ಕಷ್ಟ ಗೊತ್ತಿಲ್ಲದ, ಬಡವರ ಬವಣೆ ಅರಿಯದ ಜನ ಬಿಟ್ಟಿ ಭಾಗ್ಯ, ಪುಕ್ಕಟೆ ಗ್ಯಾರಂಟಿಗಳೆಂದು ಕುಹಕವಾಡಿದ್ದರು. ಅವರಿಗೆಲ್ಲ ಇಂತಹ ಉದಾಹರಣೆಗಳ ಮೂಲಕ ಉತ್ತರ ಸಿಗುತ್ತಲೇ ಇದೆ” ಎಂದು ಆಲಗೂರ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ್

Advertisements

“ವೇದಾಂತ್‌ನಂತಹ ಲಕ್ಷಾಂತರ ಕುಟುಂಬಗಳು ರಾಜ್ಯ ಸರ್ಕಾರದ ಯೋಜನೆಗಳಿಂದ ನಿಟ್ಟುಸಿರು ಬಿಡುತ್ತಿವೆ. ಅನೇಕ ಪ್ರತಿಭೆಗಳು ನೆಮ್ಮದಿಯಿಂದ ಶಿಕ್ಷಣ ಪಡೆಯುತ್ತಿವೆ. ಈತ ವಸತಿ ನಿಲಯದಲ್ಲಿದ್ದುಕೊಂಡು ಓದಿದ್ದಾನೆ. ಮುಂದೆಯೂ ಇಂತಹವರ ನೆರವಿಗೆ ಸರ್ಕಾರ ಇರುತ್ತದೆ.  ಸಚಿವ‌ ಎಂ ಬಿ ಪಾಟೀಲ್‌ರೂ ಕೂಡ ಇವನ ಮುಂದಿನ ಶಿಕ್ಷಣಕ್ಕೆ ಸಹಾಯ ನೀಡುವುದಾಗಿ ಹೇಳಿದ್ದು, ಹೆಮ್ಮೆಯ ವಿಷಯ” ಎಂದರು.

“ಗ್ಯಾರಂಟಿಗಳನ್ಮು ಟೀಕಿಸುತ್ತಿದ್ದವರೇ ಈಗ ತಾವೇ ಗ್ಯಾರಂಟಿ ಜಪ ಮಾಡುತ್ತಿರುವುದು ವಿಪರ್ಯಾಸ” ಎಂದು ಕುಟುಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X