ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್‌ ರನ್; ಮುಂಜಾಗ್ರತಾ ಕ್ರಮಕ್ಕೆ ಎಸ್ಪಿ ಸೂಚನೆ

Date:

ಇದೇ ಡಿಸೆಂಬರ್ 7ರ ರವಿವಾರದಂದು ವಿಜಯಪುರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ನ್ನು ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಹೆರಿಟೇಜ್ ರನ್ ನಡೆಯುವ ಎರಡು ದಿನಗಳ ಮುಂಚೆ ಅಂದರೆ ಶುಕ್ರವಾರ ಮತ್ತು ಶನಿವಾರ ನಗರದ ಡಾ. ಬಿ ಆರ್ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಾನಾ ಪೂರ್ವಭಾವಿ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ, ಡಿ.7 ರಂದು ರವಿವಾರ ಓಟ ನಡೆಯಲಿದೆ. ಪೂರ್ವಭಾವಿ ಕಾರ್ಯಕ್ರಮಗಳು ನಡೆಯುವ ದಿನ ಸಂಚಾರ ಪೂರ್ವಭಾವಿ ಕಾರ್ಯಕ್ರಮಗಳ ಎರಡು ದಿನಗಳಂದು ಪೊಲೀಸರು ಭದ್ರತೆ ಒದಗಿಸಬೇಕು. ಯಾವುದೇ ರೀತಿಯಲ್ಲಿ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಶನಿವಾರದಿಂದಲೇ ವಾಹನ ಸಂಚಾರಗಳ ಮಾರ್ಗ ಬದಲಾವಣೆ, ಝೀರೋ ಟ್ರಾಫಿಕ್ ಕುರಿತು ಸಭೆ ನಡೆಸಿ ಪರ್ಯಾಯ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸಂಚಾರಿ ಪೊಲೀಸರ ಜೊತೆಯಲ್ಲಿಯೇ ಸಿವಿಲ್ ಪೊಲೀಸರೂ ಕೂಡ ಕಟ್ಟೆಚ್ಚರ ವಹಿಸಬೇಕು. 20 ಸಾವಿರಕ್ಕೂ ಹೆಚ್ಚು ಓಟಗಾರರು ಮತ್ತು ಸಾರ್ವಜನಿಕರು ಸೇರುವುದರಿಂದ ಜನದಟ್ಟಣೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆ 6 ಗಂಟೆಯಿಂದಲೇ ನಾನಾ ವಿಭಾಗಗಳ ಓಟಗಳು ಪ್ರಾರಂಭವಾಗಲಿವೆ. 21 ಕಿ.ಮೀ, 10 ಕಿ.ಮೀ ಹಾಗೂ 5 ಕಿ.ಮೀ ಓಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಓಡುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಬೇಕು. ಆ್ಯಂಬುಲೆನ್ಸ್ ಸೇರಿದಂತೆ ಅತೀ ತುರ್ತು ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ತೊಡಕು ಆಗದಂತೆ ಈಗಲೇ ಎಸ್‌ಒಪಿ(ಸ್ಟ್ಯಾಂಡರ್ಡ್ ಆಪರೇಶನ್ ಪ್ರೊಸೀಜರ್) ಪ್ರಕಾರ ಎಲ್ಲ ಮುಂಜಾಗೃತೆ ವಹಿಸಬೇಕು. ಜೊತೆಗೆ ಟಿಇಟಿ ಪರೀಕ್ಷಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆ ಪೊಲೀಸ್ ವಾಹನಗಳಲ್ಲಿ ಅವರನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ವಾಹನಗಳ ಪಾರ್ಕಿಂಗ್(ನಿಲುಗಡೆ) ಸ್ಥಳಗಳನ್ನು ಗುರುತಿಸಿ ನಾಲ್ಕೈದು ದಿನಗಳಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು” ಎಂದು ತಿಳಿಸಿದರು.

“ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, ಈಗಾಗಲೇ ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ. ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಆದ್ಯತೆ ನೀಡಲಾಗಿದೆ. ಈಗಾಗಲೇ ಕ್ರೀಡಾಪಟುಗಳು ಓಡುವ ಮಾರ್ಗಗಳನ್ನು ಪರಿಶೀಲಿಸಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್; ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ

ಓಟ ಪ್ರಾರಂಭ ಮತ್ತು ಮುಕ್ತಾಯವಾಗುವ ಮಾರ್ಗಗಳು, ಸಾಂಸ್ಕೃತಿಕ ತಂಡಗಳು ಮತ್ತು ಹೈಡ್ರೇಶನ್ ತಂಡಗಳು ಕಾರ್ಯ ನಿರ್ವಹಿಸುವ 21 ಸ್ಥಳಗಳು, ಮುಖ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಓಟಗಾರರು ಮೆಡಲ್ ಸ್ವೀಕರಿಸುವ ಸ್ಥಳ, ಪ್ರಮುಖ ಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಆಸೀನರಾಗುವ ಸ್ಥಳ, ಫಿಜಿಯೋಥೆರಪಿ ಕೇಂದ್ರಗಳ ಕುರಿತು ರನ್ ಸಮಿತಿ ಪದಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಡಾ ಬಸವರಾಜ ಯಲಿಗಾರ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ, ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿಯ ಸಂಚಾಲಕ ಡಾ. ಮುರುಗೇಶ ಪಟ್ಟಣಶೆಟ್ಟಿ, ಪದಾಧಿಕಾರಿಗಳಾದ ವಿನಯ ಕಂಚ್ಯಾಣಿ, ಸೋಮಶೇಖರ ಸ್ವಾಮಿ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಸಂದೀಪ ಮಡಗೊಂಡ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಕಾರವಾರ | ಕಡವಾಡದಲ್ಲಿ ನಿರಂತರ ವಿದ್ಯುತ್ ಕಡಿತ – ಹೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...