ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

Date:

ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ. 29ಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಗಿರೀಶ ಬಿರಾದಾರ 2754 ಮತಗಳನ್ನು ಪಡೆಯುವ ಮೂಲಕ ಗೆಲುವು ತಮ್ಮಗಾಸಿಕೊಂಡಿದ್ದಾರೆ.

- Advertisement -

ವಾರ್ಡ್ ನಂ.29ರ ಸದಸ್ಯರಾಗಿದ್ದ ವಿಜಯಕುಮಾರ ಬಿರಾದಾರ ಅಕಾಲಿಕ ನಿಧನದಿಂದ ತೆರವಾಗಿದ್ದ ಕಾರಣಕ್ಕೆ ಉಪಚುನಾವಣೆ ನಡೆಸಲಾಗಿದೆ. ಕಳೆದ ಶನಿವಾರ ನಡೆದ ಉಪ ಚುನಾವಣೆಯಲ್ಲಿ ಶೇ 46.18 ರಷ್ಟು ಮತದಾನವಾಗಿದ್ದು, ಒಟ್ಟು 9,861 ಮತದಾರರ ಪೈಕಿ ಶೇ.46.18ರಷ್ಟು ಮಾತ್ರ ಮತದಾನವಾಗಿದೆ ಮತ್ತು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಂದಿದ್ದು, ವಿಜಯಕುಮಾರ ಅವರ ಪುತ್ರ ಗಿರೀಶ ಬಿರಾದಾರ ಗೆಲುವು ದಕ್ಕಿಸಿಕೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮಹಾನಗರ ಪಾಲಿಕೆಯು 35 ಸ್ಥಾನಗಳನ್ನು ಹೊಂದಿದೆ. ಸದ್ಯ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 1, ಎಐಎಂಐಎಂ 2 ಹಾಗೂ ಪಕ್ಷೇತರ 5 ಸದಸ್ಯರಿದ್ದಾರೆ. ಜೆಡಿಎಸ್, ಎಐಎಂಐಎಂ ಹಾಗೂ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್‌ ಅಧಿಕಾರದ ಗದ್ದುಗೆಯಲ್ಲಿ ಇದೆ.

ಇದನ್ನು ಓದಿದ್ದೀರಾ? ಬೀದರ್‌ | ಮಠಾಧೀಶರಿಗೆ ಮದುವೆ ಮಾಡಿಸಬೇಕು : ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ

ಬಿಜೆಪಿ ಅಭ್ಯರ್ಥಿ ಗಿರೀಶ 2,754 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1,762 ಮತಗಳನ್ನು ಪಡೆದಿದ್ದಾರೆ. 38 ನೋಟಾ ಮತಗಳು ಚಲಾವಣೆಯಾಗಿವೆ ಎಂದು ಉಪ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...