ವಿಜಯಪುರ | ಅಭಿವೃದ್ಧಿ ಅನುದಾನದಿಂದ ಪರಿಹಾರ ನೀಡುವುದು ಯಾವ ನ್ಯಾಯ: ಪಾಲಿಕೆ ಸದಸ್ಯ ಪ್ರಶ್ನೆ

Date:

Advertisements

ವಿಜಯಪುರ ಮಹಾನಗರ ಪಾಲಿಕೆ ನೂತನ ಮೇಯರ್ ಎಂ ಎಸ್ ಕರಡಿ ಅಧ್ಯಕ್ಷತೆಯಲ್ಲಿ ಪ್ರಥಮ ಬಾರಿಗೆ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆದಿದ್ದು, ವಿಷಯ ಪ್ರಸ್ತಾಪಿಸಿದ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಅವರು ಅಧಿಕಾರಿಗಳು ಮಾಡಿದ ತಪ್ಪಿಗೆ ನಮ್ಮ ಅಭಿವೃದ್ಧಿ ಅನುದಾನವನ್ನು ಪರಿಹಾರವಾಗಿ ನೀಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

“ಮಹಾ ಯೋಜನೆ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಆಸ್ತಿ ಕಳೆದುಕೊಂಡವರಿಗೆ ಸರ್ಕಾರದಿಂದ ಪರಿಹಾರ ಕೊಡುವ ಬದಲಿಗೆ ಮಹಾನಗರ ಪಾಲಿಕೆಯ ಅಭಿವೃದ್ಧಿ ಅನುದಾನವನ್ನೇ ಪರಿಹಾರಕ್ಕೆ ನೀಡಿದೆ. 23 ಕೋಟಿ ರೂಪಾಯಿ ಅನುದಾನವನ್ನು ಪರಿಹಾರಕ್ಕೆ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಬೇಕು” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, “ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಪರಿಹಾರಕ್ಕೆ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಪರಿಹಾರ ನೀಡದೆ ತೆರವು ಕಾರ್ಯಚರಣೆ ನಡೆಸಿ ಲೋಪ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ” ಎಂದರು.

ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಮಾತನಾಡಿ, “ಪರಿಹಾರ ನೀಡಲು ನಮಗೆ ತಕರಾರಿಲ್ಲ. ಆದರೆ, ಆ ಪರಿಹಾರ ಹಣವನ್ನು ಸರ್ಕಾರದಿಂದ ಕೊಡಿಸಿ. ಅದುಬಿಟ್ಟು ಪಾಲಿಕೆ ಅಭಿವೃದ್ಧಿ ಅನುದಾನವನ್ನು ಆ ಕಾರ್ಯಕ್ಕೆ ಬಳಕೆ ಮಾಡಿರುವುದು ಸರಿಯಲ್ಲ” ಎಂದು ಹೇಳಿದರು.

“ಈ ವಿಷಯದಲ್ಲಿ ಬಹುತೇಕ ಅಧಿಕಾರಿಗಳು ಲೋಪ ಎಸಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ವಿಶೇಷ ಸಮಿತಿ ರಚನೆ ಮಾಡಿ” ಎಂದು ಶಿವರುದ್ರ ಬಾಗಲಕೋಟ ಪಟ್ಟು ಹಿಡಿದರು.

ಸಭೆಯಲ್ಲಿ ಎಸ್ಕಾಂ ಅಧಿಕಾರಿಗಳು ಗೈರಾಗಿದ್ದು, ಅವರ ಪರವಾಗಿ ವಿಭಾಗವೊಂದರ ಅಧಿಕಾರಿ ಸಭೆಯಲ್ಲಿ ಉತ್ತರಿಸಲು ಮುಂದಾದರು. ಆಗ ಪಾಲಿಕೆ ಸದಸ್ಯರು ನೀವು ವಿಭಾಗವೊಂದಕ್ಕೆ ಅಧಿಕಾರಿ, ನೀವು ಉತ್ತರ ಕೊಟ್ಟರೆ ಪ್ರಯೋಜನವೇನು? ಸಭೆಗೆ ಹಿರಿಯ ಅಧಿಕಾರಿಗಳು ಬರಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ; ಕ್ರಮಕ್ಕೆ ದಸಂಸ ಆಗ್ರಹ

ಪಾಲಿಕೆ ಸದಸ್ಯ ಅಶೋಕ ನ್ಯಾಮಗೊಂಡ ಮಾತನಾಡಿ, “ಇದೊಂದು ಗಂಭೀರ ಸಮಸ್ಯೆ, ಜಲಮಂಡಳಿ ಹಾಗೂ ಎಸ್ಕಾಂ ಅಧಿಕಾರಿಗಳೊಂದಿಗೆ ಕೂಡಲೇ ವಿಶೇಷ ಸಭೆ ಕರೆದರೆ ಒಳ್ಳೆಯದು” ಎಂದು ಸಲಹೆ ನೀಡಿದರು.

ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಈ ವಿಷಯಗಳ ಬಗ್ಗೆ ಚರ್ಚಿಸಲು ಎಸ್ಕಾಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಾಗುವುದೆಂದು ಭರವಸೆ ನೀಡಿದರು. ಈ ವೇಳೆ ಉಪಮೇಯರ್ ಸುಮಿತ್ರ ಜಾದವ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X