ವಿಜಯಪುರ | ಬಿಜೆಪಿ ಹಿಂದೆಗೆದ ಪ್ರಕರಣಗಳ ಬಗ್ಗೆ ಸಿ ಟಿ ರವಿ ಯಾಕೆ ಮಾತನಾಡಲ್ಲ? ಎಂ.ಬಿ. ಪಾಟೀಲ್

Date:

Advertisements

‘ಹುಬ್ಬಳ್ಳಿ ಗಲಭೆಯ ಪ್ರಕರಣವನ್ನು ಹಿಂಪಡೆದ ಕುರಿತು ಮಾತನಾಡುವ ಬಿಜೆಪಿ, ಸಿ.ಟಿ. ರವಿ, ಬಿಜೆಪಿ ಅವಧಿಯಲ್ಲಿ ಹಿಂಪಡೆದಿರುವ ಪ್ರಕರಣಗಳ ಬಗ್ಗೆ ಏಕೆ ಮಾತನಾಡಲ್ಲ’ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ‘ಹೋರಾಟಗಳು ನಡೆದ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣಗಳನ್ನು ಕಾಲ ಕಾಲಕ್ಕೆ ಎಲ್ಲ ಸರ್ಕಾರಗಳು ಹಿಂಪಡೆದಿದ್ದಾರೆ. ರೈತ ಹೋರಾಟ, ವಿದ್ಯಾರ್ಥಿ ಹೋರಾಟ, ಜನರ ಹೋರಾಟಗಳ ಕೇಸ್‌ಗಳನ್ನು ಹಿಂಪಡೆದಿರುತ್ತವೆ. ಅದೇ ರೀತಿ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿರಬಹುದು’ ಎಂದರು.

‘ಕಾಂಗ್ರೆಸ್ ಸರ್ಕಾರ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ’ ಎಂದ ವಿಪಕ್ಷ ನಾಯಕ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಹಿಜಾಬ್, ಹಲಾಲ್, ಅಜಾನ್ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಆರ್. ಅಶೋಕ್ ಸಹ ಇದನ್ನೇ ಮಾಡಿದ್ದಾರೆ. ಆದರೆ, ನಾವು ಎಲ್ಲ ಜನರನ್ನು ರಕ್ಷಣೆ ಮಾಡುತ್ತೇವೆ. ಹಿಂದೂ, ಮುಸ್ಲಿಂ, ಸಿಖ್, ಬೌದ್ಧ, ಜೈನರು ಸೇರಿ ಎಲ್ಲರನ್ನು ರಕ್ಷಣೆ ಮಾಡುತ್ತೇವೆ’ ಎಂದರು.

Advertisements

ಗಲಭೆಗಳಾದಾಗ ಅಮಾಯಕರ ಮೇಲೆ ಕೇಸ್ ದಾಖಲಾಗಿರುತ್ತದೆ. ಗಲಭೆ ಮಾಡಿದವರು ಓಡಿ ಹೋಗಿರುತ್ತಾರೆ. ಗಲಭೆ ನೋಡುತ್ತ ನಿಂತವರು ಸಿಕ್ಕಿಹಾಕಿ ಕೊಂಡಿರುತ್ತಾರೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಇದನ್ನು ಓದಿದ್ದೀರಾ? ಮುಧೋಳ | ಸ್ಥಗಿತಗೊಂಡಿದ್ದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರು ಚಾಲನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರಿಗೆ ತಮ್ಮಲ್ಲೆ ನೆಲೆ ಇಲ್ಲ. ಅವರಲ್ಲಿ 20 ಗುಂಪುಗಳಿವೆ. ಮೊದಲು ತಮ್ಮ ಮನೆ ಸರಿ ಪಡೆಸಿಕೊಳ್ಳಲಿ. ಬೇರೆಯವರದ್ದೇನು ನೋಡುತ್ತಾರೆ. ಶೇ. 40 ಭ್ರಷ್ಟಾಚಾರದಿಂದ ಜನರು ಬಿಜೆಪಿಯನ್ನು ಕಿತ್ತೆಸೆದು ಮನೆಗೆ ಕಳಿಸಿದ್ದಾರೆ. ಬಿಜೆಪಿಯಲ್ಲೇ ಹೊಂದಾಣಿಕೆ ಇಲ್ಲ’ ಎಂದು ಲೇವಡಿ ಮಾಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X