ವಿಜಯಪುರ | ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತ; ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

Date:

Advertisements

ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತವಾಗಿ ನಡೆಯುತ್ತಿರುವುದನ್ನು ಗಮನಿಸಿ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ತಾಳಿಕೋಟಿಗೆ ಇತ್ತೀಚೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

“ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ನಿಗದಿತ ಕಾಲಮಿತಿಗಳಿಗೆ ಕಟ್ಟಡವನ್ನು ಪೂರ್ಣಗೊಳಿಸಬೇಕು. ಕ್ಯಾಂಟೀನ್‌ ಸುತ್ತ ಕಾಂಪೌಂಡ್ ನಿರ್ಮಿಸಿ, ಫ್ಲೋರಿಂಗ್ ಮಾಡಬೇಕು” ಎಂದು ತಾಳಿಕೋಟಿಯ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

Advertisements

ಹಳೆಯ ಪುರಸಭೆ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, “ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಧುನಿಕ ಸೌಲಭ್ಯವುಳ್ಳ ಅತ್ಯುತ್ತಮ ಸ್ಮಾರ್ಟ್‌ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿ” ಎಂದು ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಈಸುದ್ದಿ ಓದಿದ್ದೀರಾ? ಧಾರವಾಡ | ಅಂಜುಮನ್ ಸಂಸ್ಥೆಯ ಹೆಸರು ಹೇಳಲು ವಿದ್ಯಾರ್ಥಿಗಳು ಮುಜುಗರಪಡುತ್ತಾರೆ: ಇಸ್ಮಾಯಿಲ್ ತಮಟಗಾರ್ ಬೇಸರ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ಸಿ ಬಿ ಕುಂಬಾರ, ತಾಳಿಕೋಟಿ ತಹಶೀಲ್ದಾರ್‌ ಪ್ರೇಮಸಿಂಗ್ ಪವಾರ, ಮುಖ್ಯಾಧಿಕಾರಿ ಮೋಹನ ಜಾಧವ,
ಆರೋಗ್ಯ ನಿರೀಕ್ಷಕ ಶಿವಾನಂದ ಜುಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X