ವಿಜಯಪುರ | ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪುವಂತೆ ಕಾರ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ

Date:

Advertisements

ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳ ಲಾಭ ಅರ್ಹರಿಗೆ ತಲುಪುವಂತೆ ಅಧಿಕಾರಿಗಳು ಯೋಜನೆ ಕಾರ್ಯನಿರ್ವಹಿ ಸಿದ್ಧಪಡಿಸಿಕೊಂಡು ಬಳಸಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ-2025ರ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು. ಈ ಅನುದಾನ ಉಳಿಕೆಯಾಗದಂತೆ ನೋಡಿಕೊಂಡು ಸಮರ್ಪಕವಾಗಿ ಬಳಕೆ ಮಾಡಬೇಕು. ವಿವಿಧ ನಿಮಗಮಗಳಿಂದ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬ ಒದಗಿಸುವುದು, ಅವಶ್ಯ ಇರುವ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯ ನಿಗದಿತ ಗುರಿಯನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಸರ್ಕಾರಿ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

Advertisements

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲಕಾರ್ಮಿಕ ನಿರ್ಮೂಲನೆಗೆ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳಿವಳಿಕೆ ಮೂಡಿಸಬೇಕು. ಆಯೂಷ್ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಮಹತ್ವದ ಕುರಿತು ತಿಳಿ ಹೇಳುವ ಹಾಗೂ ಕಾಲಕಾಲಕ್ಕೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಮೀನುಗಾರಿಕೆ ವೃತ್ತಿಯಲ್ಲಿ ನೂರಾರು ಕುಟುಂಬಗಳು ತೊಡಗಿಸಿಕೊಂಡಿಸಿವೆ. ಇಂತಹ ಅರ್ಹ ಫಲಾನುಭವಿಗಳಿಗೆ ಅಗತ್ಯ ಪೂರಕ ಪರಿಕರಗಳನ್ನು ಒದಗಿಸಲು ಕ್ರಿಯಾಯೋಜನೆ ಸಿದ್ಧಪಡಿಸಬೇಕು” ಎಂದು ಸೂಚಿಸಿದರು.‌

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಧಿಕೃತ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು‌ ಸಿಗಬೇಕು: ಕರವೇ ಸ್ವಾಭಿಮಾನಿ ಬಣ

“ಪ್ರವಾಸೋದ್ಯಮ ಇಲಾಖೆಯ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೂ ಅವಕಾಶ ಮಾಡಿಕೊಡುವ ಮೂಲಕ ಅವರೂ ಕೂಡ ಓದಿನೊಂದಿಗೆ ರಾಜ್ಯದ ಪರಂಪರೆ, ಇತಿಹಾಸ, ಐತಿಹಾಸಿಕ ತಾಣಗಳನ್ನು ವೀಕ್ಷಣೆ ಮಾಡುವುದರಿಂದ ಜ್ಞಾನಾರ್ಜನೆ ಹೆಚ್ಚುತ್ತದೆ. ಜಿಲ್ಲೆಯ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಆಗಾಗ ಕಲಾ ತರಬೇತಿ, ಕಮ್ಮಟ ಆಯೋಜಿಸಬೇಕು. ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಗಳನ್ನು ಕಾಲ ಕಾಲಕ್ಕೆ ನಡೆಸಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X