ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಮೂಲದವನು ಎಂದು ತಿಳಿದುಬಂದಿದೆ. ಆದರೆ, ಆತನ ಹೆಸರು, ವಿಳಾಸ ಇನ್ನು ಪತ್ತೆಯಾಗಿಲ್ಲ. ಯುವಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.
ಯುವಕ ಬಸ್‌ನ ಹಿಂಬದಿ ಚಕ್ರದಡಿಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಯುವಕ ಫೋನ್ ಹಿಡಿದುಕೊಂಡು ಮಾತನಾಡುತ್ತ ರಸ್ತೆ ಬದಿಗೆ ನಿಂತಿರುವಂತೆ ಕಾಣುತ್ತಿದೆ. ಬಸ್ ಆತನ ಸಮೀಪ ಬರುತ್ತಿದ್ದಂತೆ ಮೊಬೈಲ್ ಅನ್ನು ಬಸ್ ಕೆಳಗೆ ಎಸೆದು ಹಿಂಬದಿ ಚಕ್ರದ ಅಡಿಗೆ ಬಿದ್ದಿದ್ದಾನೆ. ಆತನ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.