ವಿಜಯಪುರ | ತಂಬಾಕು ಸೇವನೆಯತ್ತ ಯುವಕರ ಸೆಳೆತ; ಶ್ರೀಕಾಂತ ಪೂಜಾರ ಕಳವಳ

Date:

Advertisements

ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ ದಿನಗಳಲ್ಲಿ ಯುವಜನತೆ ಈ ಚಟಕ್ಕೆ ಆಸಕ್ತರಾಗುತ್ತಿರುವುದು ದುರಂತಕರ ಸಂಗತಿ ಎಂದು ವಿಜಯಪುರ ಜಿಲ್ಲಾ ಸಮಾಜ ಕಾರ್ಯಕರ್ತ ಶ್ರೀಕಾಂತ ಪೂಜಾರ ಕಳವಳ ವ್ಯಕ್ತಪಡಿಸಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ಸ್ನಾತಕ ಘಟಕ, ‘ಆ’ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳನ್ನು ಸೇವಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಪೋಸ್ಟರ್‌ಗಳನ್ನು ತೋರಿಸುವ ಮೂಲಕ ಉಪನ್ಯಾಸ ನೀಡುತ್ತಾ, ತಂಬಾಕು ಗುಟ್ಕಾ, ಸಿಗರೇಟ್, ಆರ್.ಎಮ್.ಡಿ. ಮಾವಾ ಇತ್ಯಾದಿಗಳನ್ನು ತಯಾರಿಸಲು ವಿಷಕಾರಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇದರ ಸೇವನೆಯಿಂದ ಮನುಷ್ಯನಲ್ಲಿ ಬಾಯಿ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಶ್ವಾಸಕೋಶದ ತೊಂದರೆಗಳು, ಕಿಡ್ನಿಗೆ ಸಂಬಂಧಿಸಿದ ಕಾಯಿಲೆಗಳು ಉಂಟಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಮಹಿಳಾ ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ ಡಿ ಎಂ ಮದರಿ ಮಾತನಾಡಿ, “ತಂಬಾಕು ಸೇವನೆ ವ್ಯಕ್ತಿಯ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರುತ್ತದೆ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ನೇರವಾಗಿ ಆರೋಗ್ಯ ಹಾನಿ ಉಂಟಾದರೆ, ತಂಬಾಕು ಸೇವಿಸುವ ವ್ಯಕ್ತಿಯ ಜೊತೆಗೆ ಇರುವವರಿಗೂ ಶೇ.10ರಷ್ಟು ಪ್ರಮಾಣದಲ್ಲಿ ಅದರ ದುಷ್ಪರಿಣಾಮಗಳು ತೊಂದರೆಯುಂಟು ಮಾಡುತ್ತವೆ. ಸಮಾಜಮುಖಿ ಕಾರ್ಯನಿರ್ವಹಿಸುವ ಎನ್ಎಸ್ಎಸ್ ಸ್ವಯಂ ಸೇವಕಿಯರಿಗೆ ಈ ಕುರಿತು ಮಾಹಿತಿ ನೀಡಿದರೆ, ಅವರು ತಮ್ಮ ಸಮುದಾಯದಲ್ಲಿ ಅರಿವು ಮೂಡಿಸಲು ನೆರವಾಗುತ್ತದೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕೋಶದ ಜಿಲ್ಲಾ ಸಲಹೆಗಾರ ಡಾ. ಪ್ರಕಾಶ ಚವ್ಹಾಣ ಮಾತನಾಡಿ, “ತಂಬಾಕು ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿ ಕಾರ್ಯನಿರ್ವಹಿಸುವ ಅಗತ್ಯವಿದೆ” ಎಂದು ತಿಳಿಸಿದರು. ತಂಬಾಕು ಮುಕ್ತ ಸಮಾಜಕ್ಕಾಗಿ ಪ್ರಮಾಣ ವಚನವನ್ನು ಸಹ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಬೋಧಕ ಸಿಬ್ಬಂದಿಗಳು, ಎನ್.ಎಸ್.ಎಸ್ ಸ್ನಾತಕ ಮತ್ತು ಆ ಘಟಕದ ಸ್ವಯಂಸೇವಕಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X