ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

Date:

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರಗಳನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.

- Advertisement -

ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಲೆಟರ್‌ಹೆಡ್‌ನಲ್ಲಿ ಕೆಲ ಮತದಾರರು ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಿ ದಾಖಲೆಗಳನ್ನು ಸಲ್ಲಿಸಲಾಗಿದ್ದು, ಅವುಗಳ ಆಧಾರದ ಮೇಲೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ನಡೆದಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಎಂಟು ಮತದಾರರು ಮೃತಪಟ್ಟಿದ್ದಾರೆ ಎಂದು ಪಟ್ಟಿ ಸಲ್ಲಿಸಲಾಗಿದ್ದು, ಅವರ ಪೈಕಿ ಏಳು ಮಂದಿಗೆ ಸಂಬಂಧಿಸಿದ ಮರಣ ಪ್ರಮಾಣಪತ್ರಗಳ ಪ್ರತಿಗಳನ್ನೂ ನೀಡಲಾಗಿದೆ. ಆದರೆ, ಕಾಂಗ್ರೆಸ್‌ನ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ) ನಡೆಸಿದ ಪರಿಶೀಲನೆಯಲ್ಲಿ ಆ ಏಳು ಮತದಾರರು ಜೀವಂತವಾಗಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದರು.

ಮರಣ ಪ್ರಮಾಣಪತ್ರಗಳು ನೈಜವಾಗಿವೆಯೇ, ಅವುಗಳನ್ನು ಯಾವ ದಾಖಲೆಗಳ ಆಧಾರದ ಮೇಲೆ ನೀಡಲಾಗಿದೆ ಹಾಗೂ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಚುನಾವಣಾ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದರು.

ನಗರ ಕ್ಷೇತ್ರದ 198 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸುಮಾರು 1,046 ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಕಾಂಗ್ರೆಸ್ ಮುಖಂಡರು ಮಾಡಿದರು.

ಈ ಸಂಬಂಧದ ದಾಖಲೆಗಳನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗಾಗಿ ಕಳುಹಿಸಿದ್ದು, ಸ್ಥಳೀಯ ಮಟ್ಟದಲ್ಲಿ ನಡೆದ ಪರಿಶೀಲನೆಯಲ್ಲಿ ಹಲವು ಮತದಾರರು ಜೀವಂತವಾಗಿರುವುದು ಪತ್ತೆಯಾಗಿದೆ ಎಂದು ಮುಶ್ರೀಫ್ ಹೇಳಿದರು.

ತಪ್ಪು ಘೋಷಣೆ ಅಥವಾ ಸುಳ್ಳು ದಾಖಲೆಗಳ ಬಳಕೆ ಶಿಕ್ಷಾರ್ಹವಾಗಿದೆ. ಆದ್ದರಿಂದ ಸಲ್ಲಿಸಲಾಗಿರುವ ಮರಣ ಪ್ರಮಾಣಪತ್ರಗಳು ಹಾಗೂ ಇತರ ದಾಖಲೆಗಳ ಸತ್ಯಾಸತ್ಯತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ತಪ್ಪು ದಾಖಲೆಗಳು ಅಥವಾ ಸುಳ್ಳು ಮಾಹಿತಿ ಬಳಸಿರುವುದು ತನಿಖೆಯಲ್ಲಿ ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಚುನಾವಣಾ ಕಾನೂನು ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಇರ್ಫಾನ್ ಶೇಖ್, ಅಬ್ದುಲ್ ರಜಾಕ್ ಹೊರ್ತಿ, ವೈಜನಾಥ ಕರ್ಪೂರಮಠ, ಶಬ್ಬಿರ್ ಅಹ್ಮದ್ ಜಹಾಗೀರದಾರ್, ಅಜಾದ್ ಪಟೇಲ್, ಚಾಂದಸಾಬ್ ಗಡಗಲಾವ, ಅಫ್ತಾಬ್ ಖಾದ್ರಿ, ಅಬುಬಕರ್ ಅಂಬಾರಖಾನೆ ಹಾಗೂ ಫಯಾಜ್ ಕಲಾದಗಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...