ವಿಜಯಪುರ |ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ, ಉದ್ಯಮಶೀಲತೆ, ಹೈನುಗಾರಿಕೆ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳ ಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಯೋಜನೆಗಳಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರಕ್ ಟ್ರೇಲರ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ), ಹೈನುಗಾರಿಕೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.ಈಗಾಗಲೇ 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಹ ಫಲಾನುಭವಿಗಳು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಾಗಿ ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಾರ್ತೆ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...