ವಿಜಯಪುರ | ಶಿಕ್ಷಕರ ನೇಮಕಾತಿ: 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಎಐಡಿವೈಒ ಆಗ್ರಹ

Date:

ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಲಾಗಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿವೆ.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ, “ಯುವಜನರ ದೀರ್ಘಕಾಲದ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು 2026ರ ಜನವರಿ 29ರಂದು ಹೊರಡಿಸಿದ ಆದೇಶದಂತೆ 2027ರ ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ನೇರ ನೇಮಕಾತಿಗಳಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲು ತೀರ್ಮಾನಿಸಿದೆ. ಆದರೆ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಈ ಸೌಲಭ್ಯವನ್ನು ಸೇರಿಸಿಲ್ಲ. ಸರ್ಕಾರ ತನ್ನದೇ ಆದೇಶವನ್ನು ಅನುಷ್ಠಾನಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಉದ್ಯೋಗಾಕಾಂಕ್ಷಿ ಆಸಿಯಾ ದೌಲತ್ ಕೋಟಿ ಮಾತನಾಡಿ, “ಹಲವಾರು ವರ್ಷಗಳಿಂದ ಶಿಕ್ಷಕರ ನೇಮಕಾತಿ ನಡೆದಿರದ ಕಾರಣ ಅನೇಕ ಅರ್ಹ ಅಭ್ಯರ್ಥಿಗಳು ವಯೋಮಿತಿ ಮೀರಿದ್ದಾರೆ. ಇದೇ ಕಾರಣಕ್ಕೆ ಸರ್ಕಾರ 5 ವರ್ಷಗಳ ಸಡಿಲಿಕೆ ಘೋಷಿಸಿತ್ತು. ಕ್ರೈಸ್ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಯಲ್ಲಿ ಈ ಸಡಿಲಿಕೆ ಅನ್ವಯಿಸಲಾಗಿದೆ. ಆದರೆ ಶಿಕ್ಷಣ ಇಲಾಖೆ ಅಧಿಸೂಚನೆಯಲ್ಲಿ ಅದನ್ನು ಏಕೆ ಸೇರಿಸಿಲ್ಲ ಎಂಬುದು ಪ್ರಶ್ನೆಯಾಗಿದೆ” ಎಂದರು.

ಶಬ್ಬಿರ ಮುಜಾವರ್ ಮಾತನಾಡಿ, “ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ಜಾರಿಗೊಳಿಸುವುದರ ಜೊತೆಗೆ ಗಣಿತ, ಉರ್ದು, ಹಿಂದಿ ಸೇರಿದಂತೆ ಎಲ್ಲ ವಿಷಯಗಳ ಶಿಕ್ಷಕರ ನೇಮಕಾತಿಯನ್ನು ಕೂಡ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಸಂಗಮೇಶ ಪಟ್ಟಣದ, ಪರಸುರಾಮ ಚಲವಾದಿ, ಕಾಶಿಬಾಯಿ ತಳವಾರ ಹಾಗೂ ಕೆ.ಎಲ್. ಪುನೆಕರ್ ಮಾತನಾಡಿ, “ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡದಿರುವುದು ಸರ್ಕಾರದ ಆದೇಶ ಉಲ್ಲಂಘನೆಯಾಗಿದೆ. ಇದರಿಂದ ದೀರ್ಘಕಾಲದಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ತಕ್ಷಣವೇ ಈ ಬೇಡಿಕೆಯನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಎಐಡಿವೈಓ ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಶ್ರೀಶೈಲ ಕವಡಿ, ಯಲ್ಲಪ್ಪ ಪುಜಾರಿ, ಹಣಮಂತ್ರಾಯ ಶಿವಣಗಿ, ಸಬೀರಾ ಹೊನವಾಡ, ನಜೀನ್ ಇನಾಮದಾರ, ಪ್ರಸನ್ನ ಜಹಗೀರದಾರ, ಲಾಲಸಾ ಅತ್ತಾರ, ಹಸೀನಾ ಉಸ್ತಾದ ಸೇರಿದಂತೆ ಹಲವರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...