ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕೇಳಿಬಂದಿರುವ ಅಕ್ರಮಗಳನ್ನು ತಡೆಯಲು ಪರಿಶೀಲನಾ ಸಮಿತಿ ರಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸುತ್ತದೆ ಮತ್ತು ಪರಿಶೀಲನೆಯನ್ನು ಪಾರದರ್ಶಕವಾಗಿ ಮತ್ತು ಕ್ರಮಬದ್ಧವಾಗಿ ನಡೆಸುವಂತೆ ಆಮ್ ಆದ್ಮಿ ಪಾರ್ಟಿ ಒತ್ತಾಯಿಸುತ್ತದೆ ಎಂದು ಭೋಗೇಶ್ ಸೋಲಾಪುರ್ ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ವಿಜಯಾ ಕೋರಿಶೆಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಅವರು, “ಪರಿಶೀಲನಾ ಸಮಿತಿ”ಯಲ್ಲಿ ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳನ್ನು ಒಳಗೊಂಡ ಸದಸ್ಯರಗಳ ಜೊತೆಗೆ ಹೊರಗಿನ ಸದಸ್ಯರು ಇಲ್ಲವೇಕೆ” ಎಂದು ಆಕ್ರೋಶ ಹೊರಹಾಕಿದರು.
“ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಾತಿ, ಮಾರ್ಗದರ್ಶನ ಮತ್ತು ಪದವಿ ಪ್ರಧಾನ ಪ್ರಕ್ರಿಯೆಯಲ್ಲಿ ನಡೆದಿರುವ ಯು.ಜಿ.ಸಿ ನಿಯಮ ಉಲ್ಲಂಘನೆ, ಅಕ್ರಮ ಮತ್ತು ಭ್ರಷ್ಟಾಚಾರ ಆರೋಪ ಹಾಗೂ ವಿವಿಧ ಅಕ್ರಮಗಳ ಬಗ್ಗೆ ಗಂಭೀರವಾಗಿ ಗಮನ ಹರಿಸುತ್ತಿದ್ದೇವೆ. ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ನೈತಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ “ಪರಿಶೀಲನಾ ಸಮಿತಿ ರಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ವಿಜಯಪುರ ಘಟಕ ಸ್ವಾಗತಿಸುತ್ತದೆ” ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಶ್ರೀ ಶಂಕರಗೌಡ ಎಸ್. ಸೋಮನಾಳ ಹಾಗೂ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ ಮಾಧ್ಯಮ ಉಸ್ತುವಾರಿಗಳಾದ ಸಂಜು ಶೆಟಗಾರ ಉಪಸ್ಥಿತರಿದ್ದರು.




