ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

Date:

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ ಒಂದು ಬದಿಯನ್ನು ಬಂದ್ ಮಾಡಿ ಸುಮಾರು ಮೂರು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳಿಸದ ವಿಜಯಪುರ ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಆಮ್ ಆದ್ಮಿ ಪಾರ್ಟಿ (ಆಪ್) ವಿಜಯಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವಾರದೊಳಗೆ ಕಾಮಗಾರಿ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸದಿದ್ದರೆ ಸಾರ್ವಜನಿಕರನ್ನು ಒಳಗೊಂಡು ರಸ್ತೆ ತಡೆ (ರಸ್ತೆ ರೋಕೋ) ಆಂದೋಲನ ನಡೆಸುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಆಮ್ ಆದ್ಮಿ ಪಾರ್ಟಿ ವಿಜಯಪುರದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಬಂದ್ ಆಗಿರುವುದರಿಂದ ವಾಹನ ಸವಾರರು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಅಭಿವೃದ್ಧಿ ಕಾಮಗಾರಿಗಳು ಜನರ ಅನುಕೂಲಕ್ಕಾಗಿ ನಡೆಯಬೇಕೇ ಹೊರತು, ಸಾರ್ವಜನಿಕರಿಗೆ ಸಂಕಷ್ಟ ಉಂಟುಮಾಡುವಂತಿರಬಾರದು. ಕಾಮಗಾರಿ ಆರಂಭಿಸಿದ ಬಳಿಕ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಆಪ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಉಸ್ತುವಾರಿ ಸಚಿವರು, ಶಾಸಕರು ಮತ್ತು ಮೇಯರ್ ವಿರುದ್ಧ ಪ್ರಶ್ನೆ:

ಸ್ಥಳೀಯ ರಸ್ತೆಯ ಸಮಸ್ಯೆ ಮೂರು ತಿಂಗಳಾದರೂ ಬಗೆಹರಿಯದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ನಗರ ಶಾಸಕರು, ಮಹಾನಗರ ಪಾಲಿಕೆ ಮೇಯರ್ ಹಾಗೂ ಸ್ಥಳೀಯ ವಾರ್ಡ್ ಸದಸ್ಯರು ಏನು ಮಾಡುತ್ತಿದ್ದಾರೆ? ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಅವರಿಗಿಲ್ಲವೇ? ಎಂದು ಭೋಗೇಶ್ ಸೋಲಾಪುರ್ ಪ್ರಶ್ನಿಸಿದರು.

*ಕಾಮಗಾರಿ ಪೂರ್ಣಗೊಳ್ಳದಿರಲು ಕಾರಣವೇನು? ಇನ್ನೆಷ್ಟು ಸಮಯ ಬೇಕು? ಸಾರ್ವಜನಿಕರ ಸಮಸ್ಯೆಗಳಿಗೆ ಮಹಾನಗರ ಪಾಲಿಕೆ ಏಕೆ ಸ್ಪಂದಿಸುತ್ತಿಲ್ಲ? ಎಂಬ ಪ್ರಶ್ನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

  • ಆಪ್‌ನ ಪ್ರಮುಖ ಆಗ್ರಹಗಳು:
  • ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
  • ಕಾಮಗಾರಿ ಪೂರ್ಣಗೊಳಿಸುವ ನಿಗದಿತ ಕಾಲಮಿತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕು.
  • ಕಾಮಗಾರಿ ಪೂರ್ಣಗೊಳ್ಳುವವರೆಗೆ ವಾಹನ ಸವಾರರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕು.
  • ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂಬುದನ್ನು ಮಹಾನಗರ ಪಾಲಿಕೆ ಸ್ಪಷ್ಟಪಡಿಸಬೇಕು.
  • ಜನರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುವುದರಿಂದ ಸಾರ್ವಜನಿಕರು ಅನಗತ್ಯ ತೊಂದರೆ ಅನುಭವಿಸುವಂತಾಗಬಾರದು. ಮಹಾನಗರ ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಆಪ್ ಆಗ್ರಹಿಸಿದೆ.

ಒಂದು ವಾರದೊಳಗೆ ಕಾಮಗಾರಿಯನ್ನು ಆರಂಭಿಸಿ ಸಮಸ್ಯೆ ಪರಿಹರಿಸದಿದ್ದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಪಕ್ಷದ ವತಿಯಿಂದ ಸಾರ್ವಜನಿಕರನ್ನು ಒಗ್ಗೂಡಿಸಿ ರಸ್ತೆ ರೋಕೋ ಆಂದೋಲನ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಯುವ ಮುಖಂಡರಾದ ನರೇಂದ್ರ ನಂದಿಕೋಲ ಹಾಗೂ ಬಸಯ್ಯ ಸ್ಥಾವರಮಠ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...