ಅಕ್ಕಮಹಾದೇವಿ ಮಹಿಳಾ ವಿವಿ: ಎಂ.ಎ ಪತ್ರಿಕೋದ್ಯಮ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಎಂ.ಎ. ಪತ್ರಿಕೋದ್ಯಮ, ಸಮೂಹ ಸಂವಹನ ಹಾಗೂ ಡಿಪ್ಲೋಮಾ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿನಿಯರಿಂದ ಯುಯುಸಿಎಂಎಸ್ (UUCMS) ತಂತ್ರಾಂಶದ ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

- Advertisement -

ಸ್ನಾತಕ ಪದವಿಯ ಆರನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಐದು ಸೆಮಿಸ್ಟರ್‌ಗಳ ಅಂಕಪಟ್ಟಿಯೊಂದಿಗೆ ಈಗಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಆರನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾದ ಬಳಿಕ ಅಂತಿಮ ದಿನಾಂಕದೊಳಗೆ ಅಂಕಪಟ್ಟಿಯನ್ನು ಸಂಬಂಧಿತ ವಿಭಾಗಕ್ಕೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಜುಲೈ 31ರೊಳಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಕಚೇರಿ ಅಥವಾ ವಿಶ್ವವಿದ್ಯಾನಿಲಯದ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನಡೆಸಲಾಗುವುದು. ಪ್ರವೇಶವನ್ನು ಕೌನ್ಸೆಲಿಂಗ್ ಮೂಲಕ ನೀಡಲಾಗುತ್ತಿದ್ದು, ಕೌನ್ಸೆಲಿಂಗ್ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಬಿ.ಎ., ಬಿ.ಎಸ್‌.ಸಿ., ಬಿ.ಕಾಮ್‌ ಸೇರಿದಂತೆ ಪದವಿ ಪಡೆದಿರುವ ವಿದ್ಯಾರ್ಥಿನಿಯರು ಈ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಎರಡು ವರ್ಷಗಳ ಎಂ.ಎ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿನಿಯರಿಗೆ ಪತ್ರಿಕೆ, ಟಿವಿ, ರೇಡಿಯೋ, ಡಿಜಿಟಲ್ ಮೀಡಿಯಾ, ಕಾರ್ಪೊರೇಟ್ ಸಂಸ್ಥೆಗಳು, ಜಾಹೀರಾತು ಕ್ಷೇತ್ರ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ.

ಇದೇ ವೇಳೆ, ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಗುಣಮಟ್ಟದ ಪ್ರಾಯೋಗಿಕ ತರಬೇತಿ ನೀಡುವ ಉದ್ದೇಶದಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಡಿಯೋ-ವಿಡಿಯೋ ಪ್ರೊಡಕ್ಷನ್ ಸ್ಟುಡಿಯೋ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...