ಆಲಮೇಲ | ಆರೋಗ್ಯಕರ ಜೀವನಶೈಲಿಯಿಂದ ಮಾನಸಿಕ ಸ್ಥಿರತೆ ಸಾಧಿಸಿ: ರೂಬಿನಾ ನಧಾಪ್

Date:

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಮತ್ತು ಸರ್ಕಾರಿ ತಾಲೂಕು ಆಸ್ಪತ್ರೆ ಸಿಂದಗಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

- Advertisement -

ಶಿಬಿರದಲ್ಲಿ ಮಾತನಾಡಿದ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ರೂಬಿನಾ ನಧಾಪ್, “ಇತ್ತೀಚಿನ ದಿನಗಳಲ್ಲಿ ಯುವಜನತೆ ಮದ್ಯಪಾನ, ಧೂಮಪಾನ, ಮೊಬೈಲ್ ವ್ಯಸನ ಹಾಗೂ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕುಟುಂಬಗಳಲ್ಲಿ ಸಣ್ಣ-ಪುಟ್ಟ ವಿಚಾರಗಳಿಗೂ ಕಲಹಗಳು ಹೆಚ್ಚಾಗುತ್ತಿದ್ದು, ಸಂಬಂಧಗಳಲ್ಲಿ ಬಿರುಕು ಮೂಡುವುದರಿಂದ ಒಂಟಿತನ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಪ್ರತಿಯೊಬ್ಬರೂ ಮಾನಸಿಕ ಸ್ಥಿರತೆ ಕಾಪಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕು” ಎಂದು ಸಲಹೆ ನೀಡಿದರು.

ತಾಲೂಕು ಆಸ್ಪತ್ರೆಯ ಸ್ಟಾಫ್ ನರ್ಸ್ ರಫೀಕ್ ಮುಲ್ಲಾ ಮಾತನಾಡಿ, “ಗ್ರಾಮೀಣ ಪ್ರದೇಶದ ರೈತರು ಹಾಗೂ ಕೂಲಿ ಕಾರ್ಮಿಕರು ಆರೋಗ್ಯವನ್ನು ನಿರ್ಲಕ್ಷಿಸಿ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಸಾಮಾನ್ಯವಾಗಿದೆ. ವರ್ಷಕ್ಕೆ ಕನಿಷ್ಠ ಎರಡು ಬಾರಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ಅಗತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅನೇಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಬಹುದು” ಎಂದು ತಿಳಿಸಿದರು.

ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಸಹನಿರ್ದೇಶಕಿ ಪ್ರಿಯಾಂಕ ಮಾತನಾಡಿ, “ನಮಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂಬ ತಪ್ಪು ಕಲ್ಪನೆಯಿಂದ ಹಲವರು ಆರೋಗ್ಯ ತಪಾಸಣೆಯಿಂದ ದೂರ ಉಳಿಯುತ್ತಿದ್ದಾರೆ. ಇಂತಹ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ” ಎಂದು ಮಾಹಿತಿ ನೀಡಿದರು.

ಶಿಬಿರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಪ್ರಕಾಶ ರಾಠೋಡ, ಮಡಿವಾಳಮ್ಮ ಹೀರೆಮಠ, ಬಸವರಾಜ ಬಿಸನಾಳ, ಸಂಗೀತಾ ಜಾಬೇನವರ, ತಾರಾಬಾಯಿ ಬಡಿಗೇರ, ಹೇಮಾ ಶಿರೂರ ಸೇರಿದಂತೆ ಸಂಗಮ ಸಂಸ್ಥೆಯ ಸಿಬ್ಬಂದಿ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ರೈತರು ಹಾಗೂ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...