ಆಲಮಟ್ಟಿ | 15,000 ಕ್ಯುಸೆಕ್ ನೀರು ಬಿಡುಗಡೆ, 100 ಮೆಗಾವ್ಯಾಟ್‌ ವಿದ್ಯುತ್ ಉತ್ಪಾದನೆ

Date:

ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನೀರು ಹರಿಸುವ ಪ್ರಕ್ರಿಯೆ ನಡೆದಿದ್ದು, ಈ ಎರಡು ದಿನಗಳಲ್ಲಿ 15 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯದ ಬಲಭಾಗದ ಜಲವಿದ್ಯುತ್ ಉತ್ಪಾದನಾ ಘಟಕದ ಮೂಲಕ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ಇದರಿಂದ ಸುಮಾರು 100 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ನೀರನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಕ್ರಮ ಚಾಲ್ತಿಯಲ್ಲಿದ್ದು, ಶನಿವಾರ 2,500 ಕ್ಯುಸೆಕ್‌ನಿಂದ ಆರಂಭಗೊಂಡ ಹೊರಹರಿವು, ರಾತ್ರಿ ವೇಳೆಗೆ 8,000 ಕ್ಯುಸೆಕ್‌ಗೆ ಹೆಚ್ಚಿಸಲಾಗಿತ್ತು. ಬಳಿಕ ಭಾನುವಾರ ಮಧ್ಯಾಹ್ನ 2 ಗಂಟೆಯಿಂದ 15,000 ಕ್ಯುಸೆಕ್‌ಗೆ ಏರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ನಿರಂತರವಾಗಿ ಹೆಚ್ಚುತ್ತಿದೆ. ಗರಿಷ್ಠ ಮಟ್ಟ 519.60 ಮೀಟರ್ ಹಾಗೂ ಒಟ್ಟು ಸಂಗ್ರಹ ಸಾಮರ್ಥ್ಯ 123.081 ಟಿಎಂಸಿ ಇದ್ದು, ಭಾನುವಾರ ಸಂಜೆ ವೇಳೆಗೆ ಜಲಾಶಯಕ್ಕೆ 56,161 ಕ್ಯುಸೆಕ್ ನೀರು ಹರಿದು ಬಂದಿದೆ. ಸದ್ಯ ಜಲಾಶಯದಲ್ಲಿ 517.63 ಮೀಟರ್ ಎತ್ತರದಲ್ಲಿ 92.59 ಟಿಎಂಸಿ ನೀರು ಸಂಗ್ರಹವಾಗಿದೆ.

100 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಲಮಟ್ಟಿ ಜಲಾಶಯದ ಬಲಭಾಗದಲ್ಲಿರುವ ಜಲವಿದ್ಯುತ್ ಕೇಂದ್ರದ 55 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು ಸುಮಾರು 100 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಕೊಂಚ ಇಳಿಕೆಯಾಗಿದ್ದರೂ ಮಳೆ ಮುಂದುವರಿದಿದೆ. ಕೊಯ್ನಾ, ಮಹಾಬಳೇಶ್ವರ, ರಾಧಾನಗರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಇದರ ಪರಿಣಾಮ ರಾಜಾಪುರ ಬ್ಯಾರೇಜ್‌ನಿಂದ 31,500 ಕ್ಯುಸೆಕ್ ಹಾಗೂ ದೂದಗಂಗಾ ನದಿಯಿಂದ 5,280 ಕ್ಯುಸೆಕ್ ಸೇರಿ ಒಟ್ಟು 36,780 ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ.

ನಿರಂತರ ಒಳಹರಿವಿನ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೊರಹರಿವಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ ನಾಡೋಜ

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ...

ಸಂದರ್ಶನ | ಶೋಷಿತರ ಸ್ವಾಭಿಮಾನದ ಹೋರಾಟಕ್ಕೆ ದನಿಯಾದ ದಲಿತ ಚಳವಳಿ : ಮಾರುತಿ ಬೌದ್ಧೆ

ಶೋಷಿತರ ಬದುಕಿನಲ್ಲಿ ಸ್ವಾಭಿಮಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬೆಳಕು ಮೂಡಿಸುವ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು...

ನ.30ರವರೆಗೆ ನೀರು ಹರಿಸಲು ಆಗ್ರಹಿಸಿ ಯಾದಗಿರಿ ಜಿಲ್ಲೆ ಬಂದ್; ಸರ್ಕಾರಕ್ಕೆ ಸಾಮೂಹಿಕ ಸಂಘಟನೆಗಳ ಎಚ್ಚರಿಕೆ

ಬಸವಸಾಗರ ಜಲಾಶಯದಿಂದ ರೈತರ ಕೃಷಿ ಬೆಳೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು...