ಆಲಮಟ್ಟಿ | ಮಹಾರಾಷ್ಟ್ರದಲ್ಲಿ ಭಾರೀ ಮಳೆ: 1.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Date:

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅಲ್ಲಿನ ಹಲವು ಜಲಾಶಯಗಳಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುತ್ತಿರುವ ಹಿನ್ನೆಲೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಹೊರಹರಿವನ್ನು ಈ ವರ್ಷ ಮೊದಲ ಬಾರಿಗೆ 1,50,000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ.

- Advertisement -

ಭಾನುವಾರದಿಂದ ಜಲಾಶಯದಿಂದ 1,30,000 ಕ್ಯುಸೆಕ್ ನೀರನ್ನು ಹೊರಹರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಅದನ್ನು 1,50,000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ಜಲಾಶಯಕ್ಕೆ ಒಂದೇ ದಿನದಲ್ಲಿ 10.87 ಟಿಎಂಸಿ ಅಡಿ ನೀರು ಹರಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ ಜಲಾಶಯಕ್ಕೆ 1,25,855 ಕ್ಯುಸೆಕ್ (10.87 ಟಿಎಂಸಿ) ನೀರು ಒಳಹರಿದರೆ, ಇದೇ ಅವಧಿಯಲ್ಲಿ 1,28,350 ಕ್ಯುಸೆಕ್ (11 ಟಿಎಂಸಿ) ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗಿದೆ. ಸೋಮವಾರ ಸಂಜೆ ವೇಳೆಗೆ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆ ಕಂಡು 1,36,973 ಕ್ಯುಸೆಕ್ ತಲುಪಿದೆ.

ಹೊರಹರಿವು ಹೆಚ್ಚಿಸಿರುವ ಪರಿಣಾಮ ಜಲಾಶಯದ ನೀರಿನ ಮಟ್ಟ 518.92 ಮೀಟರ್‌ಗೆ ಇಳಿಕೆಯಾಗಿದ್ದು, ಪ್ರಸ್ತುತ 111.644 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಮಹಾರಾಷ್ಟ್ರದ ಪ್ರಮುಖ ಜಲಾಶಯಗಳಾದ ಕೊಯ್ನಾದಿಂದ 24,908 ಕ್ಯುಸೆಕ್, ಧೋಮ್ದಿಂದ 2,852 ಕ್ಯುಸೆಕ್, ಕಣ್ಹೇರ್ದಿಂದ 2,897 ಕ್ಯುಸೆಕ್, ಉರ್ಮೋದಿಯಿಂದ 1,719 ಕ್ಯುಸೆಕ್, ತರಳಿಯಿಂದ 225 ಕ್ಯುಸೆಕ್, ವಾರಣಾದಿಂದ 6,900 ಕ್ಯುಸೆಕ್ ಹಾಗೂ ರಾಧಾನಗರಿಯಿಂದ 7,112 ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ಬಳಿ ಕೃಷ್ಣಾ ನದಿಯ ಹರಿವು 1,15,833 ಕ್ಯುಸೆಕ್ ದಾಖಲಾಗಿದ್ದು, ದೂಧಗಂಗಾ ನದಿಯಿಂದ 17,248 ಕ್ಯುಸೆಕ್ ನೀರು ಕಲ್ಲೋಳ ಬ್ಯಾರೇಜ್ ಬಳಿ ಸೇರುತ್ತಿದೆ. ಇದರಿಂದ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಯ ಒಟ್ಟು ಹರಿವು 1,33,081 ಕ್ಯುಸೆಕ್ಗೆ ಏರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಆಲಮಟ್ಟಿ ಜಲಾಶಯಕ್ಕೆ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ಒಳಹರಿವು ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಹಾಗೂ ಅಲ್ಲಿನ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟೆಗೆ ಒಳಹರಿವು ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಹೊರಹರಿವನ್ನು 1.50 ಲಕ್ಷ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ,” ಎಂದು ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಡಿ. ಬಸವರಾಜ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...