ಆಲಮಟ್ಟಿ | ಜಲಾಶಯ ಭರ್ತಿಯಾಗುತ್ತಿದ್ದರೂ ಕಾಲುವೆಗಿಲ್ಲ ನೀರು: ಸಂಕಷ್ಟದಲ್ಲಿ ರೈತರು

Date:

ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದರೂ, ಮುಂಗಾರು ಹಂಗಾಮಿನ ನೀರಾವರಿಗೆ ಕಾಲುವೆಗಳ ಮೂಲಕ ನೀರು ಹರಿಸುವ ಕುರಿತು ಇನ್ನೂ ಸ್ಪಷ್ಟ ನಿರ್ಧಾರ ಹೊರಬಂದಿಲ್ಲ. ಜಲಾಶಯಗಳಲ್ಲಿ ನೀರಿನ ಕೊರತೆಯ ಆತಂಕ ಬಹುತೇಕ ದೂರವಾಗಿದ್ದರೂ, ಕೃಷ್ಣ ನದಿ ನೀರಾವರಿ ಸಲಹಾ ಸಮಿತಿ (ಐಸಿಸಿ) ರಚನೆ ವಿಳಂಬವಾಗಿರುವುದು ರೈತರಲ್ಲಿ ಅನಿಶ್ಚಿತತೆ ಮೂಡಿಸಿದೆ.

- Advertisement -

ಸದ್ಯ ಕಾಲುವೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರು ಹರಿಸಲಾಗುತ್ತಿದ್ದು, ನೀರಾವರಿಗಾಗಿ ಇನ್ನೂ ಯಾವುದೇ ಆದೇಶ ಹೊರಡಿಸಿಲ್ಲ. ಕೃಷಿಗೆ ನೀರು ಪೂರೈಸುವ ಅಧಿಕಾರ ಐಸಿಸಿ ಸಮಿತಿಗಿದ್ದು, ಹೊಸ ಸಮಿತಿ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸಂಪುಟ ವಿಸ್ತರಣೆ ಪರಿಣಾಮವೇ ವಿಳಂಬ?

ಮುಖ್ಯಮಂತ್ರಿಗಳ ಬದಲಾವಣೆಯೊಂದಿಗೆ ಹಿಂದಿನ ಐಸಿಸಿ ಸಮಿತಿ ಸ್ವಯಂಚಾಲಿತವಾಗಿ ರದ್ದಾಗಿದೆ. ಹೀಗಾಗಿ ಹೊಸ ಸಮಿತಿ ರಚನೆ ಅಗತ್ಯವಾಗಿದೆ. ಸಂಪ್ರದಾಯದಂತೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಐಸಿಸಿ ಅಧ್ಯಕ್ಷರಾಗುತ್ತಾರೆ.

ಸದ್ಯ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಉಸ್ತುವಾರಿಯನ್ನು ಸಚಿವ ಎಂ.ಬಿ. ಪಾಟೀಲ್ ವಹಿಸಿಕೊಂಡಿದ್ದರೂ, ಶೀಘ್ರದಲ್ಲೇ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯ ಬಳಿಕ ಉಸ್ತುವಾರಿ ಸಚಿವರಲ್ಲಿ ಬದಲಾವಣೆ ಸಾಧ್ಯತೆ ಇದೆ. ಹೊಸ ಉಸ್ತುವಾರಿ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಐಸಿಸಿ ರಚಿಸಲು ಸರ್ಕಾರ ಮುಂದಾಗುವ ಸಾಧ್ಯತೆ ಇರುವುದರಿಂದ ಸಮಿತಿ ರಚನೆ ವಿಳಂಬವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೈತರಿಗೆ ಐಸಿಸಿಯಲ್ಲಿ ಸ್ಥಾನ ನೀಡುವಂತೆ ಆಗ್ರಹ

ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ರೈತರಿಗೆ ಐಸಿಸಿ ಸಮಿತಿಯಲ್ಲಿ ಸದಸ್ಯತ್ವ ನೀಡಬೇಕು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಒತ್ತಾಯಿಸಿದ್ದಾರೆ.

ಈ ಕುರಿತು ಈದಿನ್.ಕಾಮ್ ಜೊತೆಗೆ ಮಾತನಾಡಿದ ಅವರು, “ನೀರಾವರಿ ಬೆಳೆಗಳ ನಿರ್ವಹಣೆ ಮತ್ತು ನೀರಿನ ಬಳಕೆ ಬಗ್ಗೆ ಅಧಿಕಾರಿಗಳಿಗಿಂತ ರೈತರಿಗೆ ಹೆಚ್ಚಿನ ಅನುಭವವಿದೆ. ಆದ್ದರಿಂದ ರೈತರಿಗೂ ಸಮಿತಿಯಲ್ಲಿ ಅವಕಾಶ ನೀಡಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಆಲಮಟ್ಟಿ ಹಾಗೂ ನಾರಾಯಣಪುರ ಅಣೆಕಟ್ಟುಗಳ ವ್ಯಾಪ್ತಿಯ ಕಾಲುವೆ ಪ್ರದೇಶಗಳಿಗೆ ಮುಂಗಾರು ಹಂಗಾಮಿನಲ್ಲಿ 120 ದಿನಗಳ ವಾರಬಂದಿ ಪದ್ಧತಿಯಂತೆ ನೀರು ಹರಿಸಲು ಸುಮಾರು 65 ಟಿಎಂಸಿ ಅಡಿ ನೀರು ಅಗತ್ಯವಿದೆ” ಎಂದು ನೀರಾವರಿ ಇಲಾಖೆಯ ಅಂದಾಜು ತಿಳಿಸಿದೆ.

2002ರಲ್ಲಿ ಜಲಾಶಯದಲ್ಲಿ ನೀರು ಸಂಗ್ರಹಣೆ ಆರಂಭವಾದ ಬಳಿಕ ಬಹುತೇಕ ಪ್ರತಿವರ್ಷವೂ ಮುಂಗಾರು ಬೆಳೆಗಾಗಿ ಕಾಲುವೆಗಳ ಮೂಲಕ ನೀರು ಹರಿಸಲಾಗಿದೆ. ಆದರೆ 2015–16, 2018–19 ಹಾಗೂ 2022–23ರಲ್ಲಿ ನೀರಿನ ಕೊರತೆಯಿಂದಾಗಿ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಸಾಧ್ಯವಾಗಿರಲಿಲ್ಲ. ಈ ವರ್ಷವೂ ಐಸಿಸಿ ರಚನೆ ವಿಳಂಬವಾದರೆ ನೀರಾವರಿ ಆರಂಭದಲ್ಲಿ ತೊಂದರೆ ಎದುರಾಗುವ ಆತಂಕ ರೈತ ವಲಯದಲ್ಲಿ ವ್ಯಕ್ತವಾಗಿದೆ.

ಈದಿನ್.ಕಾಮ್ ಜೊತೆಗೆ ಮಾತನಾಡಿದ ಬಸವನಬಾಗೇವಾಡಿಯ ರೈತ ವಿಠ್ಠಲ್ ಬಿರಾದಾರ್, “10 ಎಕರೆ ಕಬ್ಬು ಬಿತ್ತನೆ ಮಾಡಿದ್ದೇನೆ. ಈ ವರ್ಷ ಒಳ್ಳೆಯ ಮಳೆ ಆಗುತ್ತದೆ ಎಂಬ ಭರವಸೆಯಲ್ಲಿ ಸಾಲ ಮಾಡಿ ಬೀಜ, ಗೊಬ್ಬರ ತಂದಿದ್ದೇನೆ. ಆದರೆ ಮಳೆ ಕೈಕೊಟ್ಟಿದೆ. ಈಗ ಕಾಲುವೆ ನೀರನ್ನೇ ಆಸರೆ ಎಂದು ಕಾದಿದ್ದೇವೆ. ಆದರೆ ಐಸಿಸಿ ಅಧ್ಯಕ್ಷರ ನೇಮಕವೇ ಆಗಿಲ್ಲ ಎಂಬ ಕಾರಣಕ್ಕೆ ನೀರು ಬಿಡುವುದು ವಿಳಂಬವಾಗುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ರೈತರ ಬದುಕು ಬೀದಿಗೆ ಬಂದಿದೆ. ನಮ್ಮ ಪರಿಸ್ಥಿತಿ ಕೇಳುವವರೇ ಇಲ್ಲ. ಇನ್ನಾದರೂ ತಕ್ಷಣ ಐಸಿಸಿ ರಚಿಸಿ ಕಾಲುವೆಗೆ ನೀರು ಹರಿಸದಿದ್ದರೆ ರೈತರ ಬದುಕು ಮೂರಾಬಟ್ಟೆಯಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಭರವಸೆ

“ನೀರಾವರಿ ಇಲಾಖೆಯಿಂದ ಪ್ರಸ್ತಾವನೆ ಬಂದ ಕೂಡಲೇ ಒಂದೇ ದಿನದಲ್ಲಿ ಐಸಿಸಿ ರಚನೆಗೆ ಆದೇಶ ನೀಡಲಾಗುವುದು. ರೈತರಿಗೂ ಸಮಿತಿಯಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲಾಗುವುದು” ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಿಸಿರುವ ಈ ಸಂದರ್ಭದಲ್ಲಿ ರೈತರ ನಿರೀಕ್ಷೆಯಂತೆ ಸರ್ಕಾರ ಶೀಘ್ರವೇ ಐಸಿಸಿ ರಚಿಸಿ, ಮುಂಗಾರು ಹಂಗಾಮಿನ ನೀರಾವರಿಗೆ ಕಾಲುವೆಗಳಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಬೇಕು. ಸಮಿತಿ ರಚನೆ ವಿಳಂಬವಾದಷ್ಟೂ ಕೃಷಿ ಚಟುವಟಿಕೆಗಳ ಮೇಲಿನ ಅನಿಶ್ಚಿತತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸರ್ಕಾರದ ಮುಂದಿನ ನಡೆಯೆಡೆಗೆ ರೈತ ಸಮೂಹ ಕಾತರಿಸಿ ಕುಳಿತಿದೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ...