ಆಲಮಟ್ಟಿ | ಜೂನ್‌ ಅಂತ್ಯದವರೆಗೂ ನೀರಿಗೆ ಕೊರತೆ ಇಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ

Date:


ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಿದರೂ, ವ್ಯವಸ್ಥಿತ ನೀರು ನಿರ್ವಹಣೆಯ ಕಾರಣ ಅಲಮಟ್ಟಿ ಜಲಾಶಯದಲ್ಲಿ ಇನ್ನೂ 9.44 ಟಿಎಂಸಿ ಅಡಿ ಬಳಕೆಗೆ ಯೋಗ್ಯವಾದ ನೀರಿನ ಸಂಗ್ರಹವಿದ್ದು, ಜೂನ್‌ ಅಂತ್ಯದವರೆಗೂ ನೀರಿನ ಕೊರತೆ ಎದುರಾಗದು ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

- Advertisement -

“ಹೀಗಾಗಿ ಜೂನ್ 30ರವರೆಗೂ ಮಳೆ ಬಾರದಿದ್ದರೂ ಅಥವಾ ಜಲಾಶಯಕ್ಕೆ ಒಳಹರಿವು ಆರಂಭವಾಗದಿದ್ದರೂ, ಆಲಮಟ್ಟಿ ಜಲಾಶಯದ ಅವಲಂಬಿತ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ. ಸದ್ಯದ ನೀರು ಪೂರೈಕೆಯಲ್ಲಿ ಯಾವುದೇ ಆತಂಕವಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಆಲಮಟ್ಟಿ ಜಲಾಶಯದಲ್ಲಿ 2002ರಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಭರ್ತಿಯಾದ ನಂತರ ಇಲ್ಲಿಯವರೆಗೆ ಒಟ್ಟು 8 ಬಾರಿ ಡೆಡ್ ಸ್ಟೋರೇಜ್ ಮಟ್ಟಕ್ಕಿಂತ ಕೆಳಗೆ ಜಲಾಶಯದ ಮಟ್ಟ ಕುಸಿದಿದೆ. ಈ ವರ್ಷ ಡೆಡ್ ಸ್ಟೋರೇಜ್ ಮಟ್ಟ ತಲುಪಲು ಇನ್ನೂ 2.34 ಮೀಟರ್ ಬಾಕಿ ಇದೆ. ಈ ವರ್ಷ ಜಲಾಶಯದ ನೀರಿನ ಸಂಗ್ರಹದಲ್ಲಿ ಯಾವುದೇ ವ್ಯತ್ಯಾಸವಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಲಾಶಯದಲ್ಲಿ 17.62 ಟಿಎಂಸಿ ಅಡಿ ಡೆಡ್ ಸ್ಟೋರೇಜ್ ನೀರು ಸಂಗ್ರಹವಾಗಿದೆ. ಪ್ರಸ್ತುತ 9.44 ಟಿಎಂಸಿ ಅಡಿ ಬಳಕೆಯೋಗ್ಯ ನೀರು ಇನ್ನೂ ಉಳಿದಿದೆ. ರಾಜ್ಯದಲ್ಲಿ ಹೆಚ್ಚು ಡೆಡ್ ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಜಲಾಶಯಗಳಲ್ಲಿ ಆಲಮಟ್ಟಿಯೂ ಒಂದು.

ಇದನ್ನೂ ಓದು> ದಕ್ಷಿಣ ಕನ್ನಡ | ಬತ್ತಿದ ತುಂಬೆ, ಶಾಂಭವಿ, ಗುರುಪುರ ಜಲಾಶಯ; ಕುಡಿಯುವ ನೀರಿಗೂ ಹಾಹಾಕಾರ

ಹಿಂದಿನ ಕನಿಷ್ಠ ಮಟ್ಟಗಳು:

  • 2003ರಲ್ಲಿ ಜಲಾಶಯದ ಮಟ್ಟ 502.72 ಮೀಗೆ ಕುಸಿದಿದ್ದು, ಕೇವಲ 8.777 ಟಿಎಂಸಿ ಅಡಿ ನೀರಿತ್ತು.
  • 2017ರಲ್ಲಿ ಜೂನ್ 7ರಂದು ಮಟ್ಟ 503.47 ಮೀಗೆ ಇಳಿದಿದ್ದು, 9.815 ಟಿಎಂಸಿ ಅಡಿ ನೀರಿತ್ತು.
  • 2004, 2005, 2009, 2012 ಮತ್ತು 2013ರಲ್ಲಿ ಸಹ ಜಲಾಶಯದ ಮಟ್ಟ ಗಣನೀಯವಾಗಿ ಕುಸಿದಿತ್ತು.

ಹಿಂದೆ ನೀರಾವರಿ ಕ್ಷೇತ್ರ ಕಡಿಮೆ ಇತ್ತು, ಕೆರೆಗಳ ಭರ್ತಿ ಮತ್ತು ಕುಡಿಯುವ ನೀರಿನ ಜಾಕ್‌ವೆಲ್‌ಗಳ ಸಂಖ್ಯೆ ಕಡಿಮೆಯಿತ್ತು. ಆದರೆ ಈ ವರ್ಷ ಬೆಳಗಾವಿ ಜಿಲ್ಲೆಯ 124 ಕೆರೆಗಳನ್ನು ಎರಡು ಬಾರಿ ಭರ್ತಿ ಮಾಡಲಾಗಿದೆ. ಮೇ ಕೊನೆಯ ವಾರ ಬೆಳಗಾವಿ ಪ್ರಾದೇಶಿಕ ಆಯುಕ್ತರ ಅನುಮತಿಯೊಂದಿಗೆ ಕೆರೆಗಳ ಭರ್ತಿಗಾಗಿ 1.90 ಟಿಎಂಸಿ ಅಡಿ ನೀರನ್ನು ಕಾಯ್ದಿರಿಸಲಾಗಿದೆ.

ಗರಿಷ್ಠ ಪ್ರಮಾಣದಲ್ಲಿ ನೀರಿನ ಸದುಪಯೋಗ ಮಾಡಿಕೊಂಡಿದ್ದರೂ, ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಸತತ ನಿಗಾ ಇಟ್ಟು ವ್ಯವಸ್ಥಿತ ನೀರು ನಿರ್ವಹಣೆ ಮಾಡಿದ ಪರಿಣಾಮ ಈ ವರ್ಷ ಆಲಮಟ್ಟಿ ಜಲಾಶಯದಲ್ಲಿ 9.44 ಟಿಎಂಸಿ ಅಡಿ ಬಳಕೆಯೋಗ್ಯ ನೀರು ಉಳಿದಿದೆ. ಕಳೆದ ವರ್ಷ ಇದೇ ದಿನಕ್ಕೆ 6.66 ಟಿಎಂಸಿ ಅಡಿ ಮಾತ್ರ ಬಳಕೆಯೋಗ್ಯ ನೀರು ಲಭ್ಯವಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...