ವಿಜಯಪುರ | ಟ್ರ್ಯಾಕ್ಟರ್‌ಗೆ ಆ್ಯಂಬುಲೆನ್ಸ್‌ ಢಿಕ್ಕಿ; ಗರ್ಭಿಣಿ ಸಾವು

Date:

ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ನಿಂತಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಹೂವಿನಹಿಪ್ಪರಗಿಯಲ್ಲಿ ಘಟನೆ ನಡೆದಿದೆ ಮಗು ಕೂಡ ಹೊಟ್ಟೆಯಲ್ಲೇ ಸಾವನ್ನಪ್ಪಿದೆ. ತಾಳಿಕೋಟೆಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯವಾಗ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಾಳಿಕೋಟೆ ತಾಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ ಮೃತದ ದುರ್ದೈವಿ. ಭಾಗ್ಯಶ್ರೀ ಅವರಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಆಕೆಯನ್ನು ತಾಳಿಕೋಟೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಹಾಗಾಗಿ, ಆಕೆಯನ್ನು ಆ್ಯಂಬುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಭಾಗ್ಯಶ್ರೀ ಸಾವನ್ನಪ್ಪಿದ್ದಾರೆ. ಗರ್ಭಿಣಿಯ ಕುಟುಂಬಸ್ಥರು ತಾಳಿಕೋಟೆ ಸಮುದಾಯ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿದ್ದ ಇಬ್ಬರು ಸ್ಟಾಫ್‌ ನರ್ಸ್ ಮತ್ತು ಒಬ್ಬ ಸಹಾಯಕನಿಗೆ ಅಪಘಾತದಲ್ಲಿ ಗಾಯವಾಗಿವೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...