ಬಬಲೇಶ್ವರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ 50ಕ್ಕೂ ಹೆಚ್ಚು ಕಾರ್ಯಕರ್ತರು

Date:

ಬಬಲೇಶ್ವರ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದಿಂದ ಪ್ರೇರಿತರಾಗಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -

ಮಂಗಳವಾರ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸಮ್ಮುಖದಲ್ಲಿ ಮುಖಂಡ ಸುನೀಲ್ ಡೇಂಬ್ರಿ ನೇತೃತ್ವದಲ್ಲಿ ಗುರಪ್ಪ ರಂಗಪ್ಪಗೋಳ, ಕೂಸಪ್ಪ ನರಲೆ, ವಿಠ್ಠಲ ತುಪನೂರ, ಸಾವಿತ್ರಿ ಡೇಂಬ್ರಿ, ಸುರೇಖಾ ಡೇಂಬ್ರಿ ಸೇರಿದಂತೆ 50ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ವೇಳೆ ಮಾತನಾಡಿದ ಸಚಿವ ಎಂ. ಬಿ. ಪಾಟೀಲ, “ಹೊನವಾಡ ಗ್ರಾಮದಲ್ಲಿ ಗಮನಾರ್ಹ ಪ್ರಮಾಣದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಸುಮಾರು 15ರಿಂದ 20 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿವೆ” ಎಂದರು.

ಬಿಜೆಪಿ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಂಡಿದೆ. ಪಕ್ಷ ಸಂಘಟನೆಯಲ್ಲಿ ಹೊಸಬರು–ಹಳಬರು ಎಂಬ ಯಾವುದೇ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಸೇರ್ಪಡೆಗೊಂಡ ಮುಖಂಡ ಸುನೀಲ್ ಡೇಂಬ್ರಿ ಮಾತನಾಡಿ, “ಸಚಿವ ಎಂ. ಬಿ. ಪಾಟೀಲ ಅವರ ಬೆನ್ನೆಲುಬಾಗಿ ಕೆಲಸ ಮಾಡುತ್ತೇವೆ. 20ಕ್ಕೂ ಹೆಚ್ಚು ವರ್ಷಗಳಿಂದ ಬಿಜೆಪಿಯಲ್ಲಿದ್ದ ನಮಗೆ ಇದೀಗ ಭ್ರಮನಿರಸನವಾಗಿದೆ. ಸಚಿವ ಎಂ.ಬಿ ಪಾಟೀಲ ಅವರ ಇಚ್ಛಾಶಕ್ತಿ ಹಾಗೂ ಸತತ ಕಾಳಜಿಯಿಂದ ಬಬಲೇಶ್ವರ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ವಿಶ್ವಾಸವಿಟ್ಟು ಹೊನವಾಡ ಹಾಗೂ ಇಡೀ ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...